ವಿ. ಸೋಮಣ್ಣ ಟೆಂಪಲ್ ರನ್

ವಿ. ಸೋಮಣ್ಣ ಟೆಂಪಲ್ ರನ್

ತುಮಕೂರು: ಲೋಕಸಭಾ ಚುನಾವಣೆಯಲ್ಲಿ ಗೆದ್ದು ನೂತನ ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಪ್ರಮಾಣ ಸ್ವೀಕರಿಸಿದ ವಿ. ಸೋಮಣ್ಣಅವರು ಇದೀಗ ಟೆಂಪಲ್ ರನ್ ಕೈಗೊಂಡಿದ್ದಾರೆ. ಇದನ್ನೂ ಓದಿ: ದರ್ಶನ್ ವಿರುದ್ಧ ಸಿಕ್ಕಿವೆ ಪ್ರಮುಖ ಸಾಕ್ಷಿಗಳು..!

ಹೌದು, ತುಮಕೂರಿನ ಪುಣ್ಯಕ್ಷೇತ್ರ ಶ್ರೀ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ, ಲಿಂಗೈಕ್ಯರಾದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳವರ ಗದ್ದುಗೆಯ ಆಶೀರ್ವಾದ ಪಡೆದು, ಪೀಠಾಧಿಪತಿಗಳಾದ ಜಗದ್ಗುರು ಪರಮಪೂಜ್ಯ ಶ್ರೀ ಶ್ರೀ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿಗಳವರ ಆಶೀರ್ವಾದ ಪಡೆದುಕೊಂಡಿದ್ದಾರೆ

ಈ ಸಂದರ್ಭದಲ್ಲಿ, ಮಾಜಿ ಸಂಸದರಾದ ಶ್ರೀ ಜಿ.ಎಸ್.ಬಸವರಾಜು, ಶಾಸಕರಾದ ಜ್ಯೋತಿ ಗಣೇಶ್ ಅವರು, ಸುರೇಶ್ ಗೌಡರವರು, ಜಿಲ್ಲೆ ಹಾಗೂ ತಾಲ್ಲೂಕಿನ ಮೈತ್ರಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related