ಕೋಟ ಶ್ರೀನಿವಾಸ್ ಪೂಜಾರಿಗೆ ಜಯಭೇರಿ

ಕೋಟ ಶ್ರೀನಿವಾಸ್ ಪೂಜಾರಿಗೆ ಜಯಭೇರಿ

ಉಡುಪಿ: ಉಡುಪಿ-ಚಿಕ್ಕಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಅವರು ಭರ್ಜರಿ ಗೆಲುವು ಸಾಧಿಸುವ ಮೂಲಕ ತಮ್ಮ ಅಧಿಕಾರದ ಗದ್ದುಗೆಯನ್ನು ಏರಿದ್ದಾರೆ.

ಹೌದು, ಮತ ಎಣಿಕೆ ಪ್ರಕ್ರಿಯೆ ಆರಂಭವಾದಾಗಿನಿಂದಲೂ ಕೋಟ ಶ್ರೀನಿವಾಸ್ ಪೂಜಾರಿ ಅವರು ಸತತವಾಗಿ ಮುನ್ನಡೆ ಸಾಧಿಸಿದ್ದರು. ಇದೀಗ ಅಂತಿಮವಾಗಿ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರನ್ನು ಸೋಲಿಸುವ ಮೂಲಕ ಕೋಟ ಶ್ರೀನಿವಾಸ್ ಪೂಜಾರಿ ಅವರು ಗೆಲುವಿನ ನಗೆ ಬೀರಿದ್ದಾರೆ. ಇದನ್ನೂ ಓದಿ: ಬಿಸಿಲಿನಾಡಿನಲ್ಲಿ ಇತಿಹಾಸ ಸೃಷ್ಟಿಸಿದ ನಿವೃತ್ತ ಐಎಎಸ್ ಅಧಿಕಾರಿ

ಮತ್ತೆ ಅಭೂತಪೂರ್ವ ಮುನ್ನಡೆ ಸಾಧಿಸಿರುವ ಕೋಟ ಶ್ರೀನಿವಾಸ ಪೂಜಾರಿ ಅವರು, 7,27,393 ಮತಗಳನ್ನು ಪಡೆದಿದ್ದು, ಕಾಂಗ್ರೆಸ್‌ನ ಜಯಪ್ರಕಾಶ್ ಹೆಗ್ಡೆ ಅವರು 4,70,215 ಮತಗಳನ್ನು ಗಳಿಸಿದ್ದಾರೆ. ಈ ಮೂಲಕ ಕೋಟ ಶ್ರೀನಿವಾಸ್ ಪೂಕಾರಿ ಅವರು 2,57,178 ಮತಗಳ ಮುನ್ನಡೆ ಸಾಧಿದ್ದಾರೆ.

 

Related