ನಟ ವಿಜಯರಾಘವೇಂದ್ರ ಪತ್ನಿ ಹೃದಯಾಘಾತದಿಂದ ನಿಧನ!

ನಟ ವಿಜಯರಾಘವೇಂದ್ರ ಪತ್ನಿ ಹೃದಯಾಘಾತದಿಂದ ನಿಧನ!

ಬೆಂಗಳೂರು: ಕನ್ನಡ ಚಿತ್ರರಂಗದ ನಟ ವಿಜಯ ರಾಘವೇಂದ್ರ ಅವರ ಧರ್ಮ ಪತ್ನಿ ಯಾಗಿರುವಂತಹ ಸ್ಪಂದನ ಅವರು ಇಂದು ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.

ಅವರು ವಿದೇಶಿ ಪ್ರಯಾಣದಲ್ಲಿದ್ದಾಗ ಹೃದಯ ಎಂದು ತಿಳಿದುಬಂದಿದೆ. ಕುಟುಂಬ ಸಮೇತ ವಿದೇಶಕ್ಕೆ ತೆರಳಿದ್ದಾಗ ಹಾರ್ಟ್‌ ಅಟ್ಯಾಕ್‌ ಆಗಿದ್ದು ರಾಜ್ ಕುಟುಂಬಕ್ಕೆ ಮತ್ತೆ ದೊಡ್ಡ ಆಘಾತವಾಗಿದೆ ಎನ್ನಬಹುದು.

ನಟ ವಿಜಯ ರಾಘವೇಂದ್ರ ಅಭಿಮಾನಿಗಳಿಗೆ ದೊಡ್ಡ ಶಾಕಿಂಗ್‌ ಸುದ್ದಿ ಎಂದೇ ಹೇಳಬಹುದು. ಥೈಲ್ಯಾಂಡ್‌ ಪ್ರವಾಸಕ್ಕೆ ತೆರಳಿದ್ದಾಗ ಲೋ ಬಿಪಿ, ತಕ್ಷಣ ಹೃದಯಾಘಾತವಾಗಿದ್ದಾಗ ಸ್ಥಳಿಯ ಆಸ್ಪತ್ರೆಗೆ ದಾಖಲು ಮಾಡಲಾಗುತ್ತದೆ ಆದರೆ ಕೊನೆಯುಸಿರೆಳೆದಿದ್ದಾರೆ.

ನಾಳೆ ಬೆಂಗಳೂರಿಗೆ ವಿಜಯ್‌ ಪತ್ನಿ ಪಾರ್ಥಿವ ಶರೀರ ಬರುವ ಸಾಧ್ಯತೆಯಿದ್ದು, ವಿಧಿ ವಿಧಾನ ಕಾರ್ಯವೆಲ್ಲ ಬೆಂಗಳೂರಿನಲ್ಲಿ ಜರುಗಲಿದೆ. ನಿವೃತ್ತ ಅಸಿಸ್ಟೆಂಟ್‌ ಪೊಲೀಸ್‌ ಆಫೀಸರ್‌ ಬಿ.ಕೆ ಶಿವರಾಮ್‌ ಅವರ ಪುತ್ರಿ ಸ್ಪಂದನ ಅವರು ವಿಜಯ್‌ ಹಲವು ವರ್ಷಗಳಿಂದ ಪ್ರೀತಿಸಿ, 2007ರಲ್ಲಿ ಗುರುಹಿರಿಯರ ಸಮ್ಮುಖದಲ್ಲಿ ಮದುವೆಯಾದರು. ಈ ಜೋಡಿಗೆ ಒಬ್ಬ ಮಗನಿದ್ದಾನೆ.

 

 

 

Related