Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಭತ್ತ ನಾಟಿ ರೈತಪರ ಬಜೆಟ್ ಮಂಡಿಸಲು ವಿಜಯೇಂದ್ರ ಆಗ್ರಹ
  • Politics
  • State

ಭತ್ತ ನಾಟಿ ರೈತಪರ ಬಜೆಟ್ ಮಂಡಿಸಲು ವಿಜಯೇಂದ್ರ ಆಗ್ರಹ

admin March 4, 2025
Spread the love

ಮಂಡ್ಯ: ರಾಜ್ಯದ ಮುಂದಿನ ಬಜೆಟ್ ರೈತಪರ ಬಜೆಟ್ ಆಗಿರಲಿ ಎಂದು ಮುಖ್ಯಮಂತ್ರಿಗಳನ್ನು ವಿನಂತಿಸುವುದಾಗಿ ಮತ್ತು ಆಗ್ರಹಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.

ಮಂಡ್ಯ ಜಿಲ್ಲೆಯ ಕೊತ್ತತ್ತಿ ಗ್ರಾಮದ ರೈತ ಸುಖೇಂದ್ರ ಶಿವಬಸಪ್ಪ ಅವರ ಜಮೀನಿನಲ್ಲಿ ಇಂದು ಭತ್ತ ನಾಟಿ ಕಾರ್ಯಕ್ರಮದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ರಾಜ್ಯ ಸರಕಾರಕ್ಕೆ ರೈತರ ಸಂಕಷ್ಟಕ್ಕೆ ಸ್ಪಂದಿಸುವ ಸದ್ಬುದ್ಧಿಯನ್ನು ತಾಯಿ ಚಾಮುಂಡೇಶ್ವರಿ ಕರುಣಿಸಲಿ ಎಂದು ಅವರು ಪ್ರಾರ್ಥಿಸಿದರು.

ಪಕ್ಷದ ಜಿಲ್ಲೆಯ ಮುಖಂಡರು, ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಭತ್ತ ನಾಟಿ ಮಾಡಿದ್ದಾಗಿ ಅವರು ತಿಳಿಸಿದರು. ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಯಾವುದೇ ರೈತಪರ ನಿರ್ಧಾರ ಮಾಡಿಲ್ಲ ಎಂದು ಟೀಕಿಸಿದರು. ಇದನ್ನೂ ಓದಿ: ಬಂದಿಲ್ಲ ಬಂದಿಲ್ಲ 4 ತಿಂಗಳ ಗೃಹಲಕ್ಷ್ಮಿ ಹಣ ಬಂದಿಲ್ಲ..!

ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರವು ಹಲವಾರು ಬಾರಿ ರೈತರ ಉತ್ಪನ್ನಗಳ ಬೆಂಬಲ ಬೆಲೆಯನ್ನು ಹೆಚ್ಚಿಸಿದೆ. ಕಿಸಾನ್ ಸಮ್ಮಾನ್ ಯೋಜನೆಯನ್ನೂ ಜಾರಿಗೊಳಿಸಿದ್ದಾರೆ. ಅದನ್ಯಾಕೆ ಸಿದ್ದರಾಮಯ್ಯರ ಸರಕಾರ ನಿಲ್ಲಿಸಿದೆ ಎಂದು ಕೇಳಿದರು. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ರೈತರು ಹೊಲಕ್ಕೆ ಟ್ರಾನ್ಸ್‍ಫಾರ್ಮರ್ ಹಾಕಲು 25 ಸಾವಿರ ರೂ. ಕಟ್ಟಿದರೆ ಸಾಕಾಗುತ್ತಿತ್ತು. ಸಿದ್ದರಾಮಯ್ಯರ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಇವತ್ತು 2ರಿಂದ 3 ಲಕ್ಷ ಖರ್ಚಾಗುತ್ತಿದೆ ಎಂದು ವಿವರಿಸಿದರು.

About the Author

admin

Administrator

Visit Website View All Posts

Spread the love

Post navigation

Previous: ಬಂದಿಲ್ಲ ಬಂದಿಲ್ಲ 4 ತಿಂಗಳ ಗೃಹಲಕ್ಷ್ಮಿ ಹಣ ಬಂದಿಲ್ಲ..!
Next: ಬಡವರ ವಿರೋಧಿ, ಅಭಿವೃದ್ಧಿಶೂನ್ಯ ಕಾಂಗ್ರೆಸ್ ಸರಕಾರ

Views:

10

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.