ನಾನೇ ಚುನಾವಣೆಗೆ ನಿಂತಿದ್ದೇನೆ ಎಂದು ಮತ ಹಾಕಿ: ಸಿಎಂ

ನಾನೇ ಚುನಾವಣೆಗೆ ನಿಂತಿದ್ದೇನೆ ಎಂದು ಮತ ಹಾಕಿ: ಸಿಎಂ

ಬೆಳಗಾವಿ: ಕರ್ನಾಟಕ ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಯುತ್ತಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಅಭ್ಯರ್ಥಿಗಳ ಪರವಾಗಿ ಘಟಾನುಘಟಿ ನಾಯಕರುಗಳು ಭರ್ಜರಿ ಮತಯಾಚನೆ ಮಾಡುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಅವರ ಪರವಾಗಿ ಭರ್ಜರಿ ಮತಯಾಚನೆಯಲ್ಲಿ ತೊಡಗಿದ್ದಾರೆ.

ಬೆಳಗಾವಿಯಲ್ಲಿ ನಡೆದ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಸರ್ಕಾರಿ ನೌಕರರಿಗೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಯಾರಿಗಾದರೂ ಸಂಬಳ ಕೊಟ್ಟಿಲ್ಲ ಎಂಬ ಆರೋಪ ಕೇಳಿದೆಯಾ ಎಂದು ಪ್ರಶ್ನಿಸಿದ್ದಾರೆ.

ನಾವು ಅಧಿಕಾರಕ್ಕೆ ಬಂದ ಮೇಲೆ ಒಬ್ಬ ಸರ್ಕಾರಿ ಅಧಿಕಾರಿಗಳ ಸಂಬಳವನ್ನು ಉಳಿಸಿಕೊಳ್ಳದೆ ಪ್ರತಿ ತಿಂಗಳು ಸರಿಯಾಗಿ ಸರ್ಕಾರಿ ಅಧಿಕಾರಿಗಳಿಗೆ ಸಂಬಳ ನೀಡುತ್ತಿದ್ದೇವೆ ಎಂದರು. ಇದರ ಜೊತೆಗೆ ರಾಜ್ಯದ ಜನತೆಗೆ ಒಳ್ಳೇದಾಗಲೆಂದು ಎಲ್ಲಾ ಐದು ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ.  ಇದನ್ನೂ ಓದಿ: ಮೋದಿ ಭಯಾನಕ ಸುಳ್ಳುಗಳಿಂದ ಭಾರತೀಯ ದಾರಿತಪ್ಪಿಸುತ್ತಿದ್ದಾರೆ: ಸಿಎಂ

ಹಾಗಾಗಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಕೇಂದ್ರ ಸರ್ಕಾರದಲ್ಲೂ ಕೂಡ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದರೆ ಇನ್ನಷ್ಟು ನಮ್ಮ ರಾಜ್ಯದ ಜನತೆ ಮತ್ತು ದೇಶದ ಜನತೆ ಮುಂದುವರೆಯುತ್ತಾರೆ ಎಂದು ಹೇಳಿದರು.

ಕಾಂಗ್ರೆಸ್​ ಅಧಿಕಾರಕ್ಕೆ ಬರಬೇಕಾ ಅಥವಾ ಸುಳ್ಳು ಹೇಳಿಕೊಂಡು ತಿರುಗಾಡುತ್ತಿರುವ ಮೋದಿ ಸರ್ಕಾರ ಅಧಿಕಾರಕ್ಕೆ ಬರಬೇಕಾ ಎಂಬುದುನ್ನು ನೀವೇ ನಿರ್ಧರಿಸಿ ಎಂದು ಹೇಳಿದ್ದಾರೆ. ನೀವು ಕಾಂಗ್ರೆಸ್​ ಅಭ್ಯರ್ಥಿಗೆ ಆಶೀರ್ವಾದ ಮಾಡಿದರೆ ನನಗೆ ಮಾಡಿದಂತಾಗುತ್ತದೆ. ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಅಲ್ಲ ನಾನೇ ಅಭ್ಯರ್ಥಿಯಾಗಿ ನಿಂತಿದ್ದೇನೆ ಎಂದುಕೊಂಡು ಮತಹಾಕಿ ಎಂದಿದ್ದಾರೆ.

 

Related