13 ರಾಜ್ಯಗಳಲ್ಲಿ ಮತದಾನ; ಹೆಚ್ಚಿನ ಮತದಾನಕ್ಕೆ ಮೋದಿ ಮನವಿ

13 ರಾಜ್ಯಗಳಲ್ಲಿ ಮತದಾನ; ಹೆಚ್ಚಿನ ಮತದಾನಕ್ಕೆ ಮೋದಿ ಮನವಿ

ಬೆಂಗಳೂರು: ದೇಶದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು (ಏಪ್ರಿಲ್ 26 ಶುಕ್ರವಾರ) 13 ರಾಜ್ಯಗಳ 89 ಲೋಕಸಭಾ ಕ್ಷೇತ್ರಗಳಲ್ಲಿ ಎರಡನೇ ಮತದಾನ ನಡೆಯುತ್ತಿದ್ದು, ಎಲ್ಲರೂ ತಪ್ಪದೇ ಮತದಾನ ಚಲಾಯಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರು ಕರೆ ನೀಡಿದ್ದಾರೆ.

ಇನ್ನು ಕರ್ನಾಟಕ ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ 14 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದು, ರಾಜ್ಯದಲ್ಲಿ ಬೆಳಗ್ಗೆ 7 ಗಂಟೆಯಿಂದಲೇ ಭರ್ಜರಿ ಮತದಾನ ನಡೆಯುತ್ತಿದೆ. ತಮ್ಮ ಇಷ್ಟನಾಯಕನನ್ನು ಆಯ್ಕೆ ಮಾಡಲು ಮತದಾರರು ಹುಮ್ಮಸ್ಸಿನಿಂದ ಮತ ಚಲಾಯಿಸುತ್ತಿದ್ದಾರೆ.

ಇನ್ನು ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಮಾಧ್ಯಮ ಎಕ್​​ನಲ್ಲಿ ಸಂದೇಶ ಪ್ರಕಟಿಸಿರುವ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಮತದಾರರಲ್ಲಿ ಮನವಿ ಮಾಡಿದ್ದಾರೆ. ಕರ್ನಾಟಕದ ಜನತೆಗೆ  ಮೋದಿಯವರು ಕನ್ನಡದಲ್ಲಿಯೇ ಸಂದೇಶ ಪ್ರಕಟಿಸಿ ಮನವಿ ಮಾಡಿದ್ದಾರೆ.

‘ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿರುವ ಕ್ಷೇತ್ರಗಳಲ್ಲಿ ಪ್ರತಿಯೊಬ್ಬರೂ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡುತ್ತೇನೆ. ಹೆಚ್ಚಿನ ಪ್ರಮಾಣದ ಮತದಾನವು ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ. ನಮ್ಮ ಯುವ ಮತದಾರರು ಮತ್ತು ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನಾನು ವಿಶೇಷವಾಗಿ ಕೋರುತ್ತೇನೆ. ನಿಮ್ಮ ಮತ ನಿಮ್ಮ ಧ್ವನಿ!’ ಎಂದು ಸಂದೇಶದಲ್ಲಿ ಮೋದಿ ಉಲ್ಲೇಖಿಸಿದ್ದಾರೆ.

Related