ಗಾಯಕ ವಾಜಿದ್ ಖಾನ್ ನಿಧನ

ಗಾಯಕ ವಾಜಿದ್ ಖಾನ್ ನಿಧನ

ಮುಂಬೈ: ಬಾಲಿವುಡ್ ನ ಹೆಸರಾಂತ ಸಂಗೀತ ನಿರ್ದೇಶಕ, ಗಾಯಕ ಸಾಜಿದ್-ವಾಜಿದ್ ಖ್ಯಾತಿಯ ವಾಜಿದ್ ಖಾನ್ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಭಾನುವಾರ ರಾತ್ರಿ ನಿಧನರಾಗಿದ್ದಾರೆ.

ಮಾರಕ ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿದ್ದ ವಾಜಿದ್ ಖಾನ್ ರನ್ನು ಕೋಕಿಲಾಬೆನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಆರೋಗ್ಯದಲ್ಲಿ ಏರುಪೇರಾದ ಪರಿಣಾಮ ವೆಂಟಿಲೇಟರ್ ನಲ್ಲಿಡಿಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಾಜಿದ್ ಖಾನ್ (42) ನಿಧನರಾಗಿದ್ದಾರೆ.

ಕಿಡ್ನಿ ಸಂಬಂಧಿ ಖಾಯಿಲೆಯಿಂದಲೂ ಬಳಲುತ್ತಿದ್ದ ವಾಜಿದ್ ಖಾನ್, ಕೆಲವೇ ತಿಂಗಳುಗಳ ಹಿಂದೆಯಷ್ಟೇ ಕಿಡ್ನಿ ಟ್ರಾನ್ಸ್ ಪ್ಲಾಂಟ್ ಗೆ ಒಳಗಾಗಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಇನ್ನು ಬಾಲಿವುಡ್ ನಲ್ಲಿ ಸಾಜಿದ್-ವಾಜಿದ್ ಜೋಡಿ ಎಂದೇ ಖ್ಯಾತಿಗಳಿಸಿದ್ದ ವಾಜಿದ್ ಖಾನ್, ಸಲ್ಮಾನ್ ಖಾನ್ ಅಭಿನಯದ ‘ಪ್ಯಾರ್ ಕಿಯಾ ತೋ ಡರ್ನಾ ಕ್ಯಾ’ ಸಿನಿಮಾದ ಮೂಲಕ ಬಾಲಿವುಡ್ ಪ್ರವೇಶಿಸಿದ್ದರು. ‘ಚೋರಿ ಚೋರಿ’, ‘ಹಲೋ ಬ್ರದರ್’, ‘ಮುಜ್ಸೆ ಶಾದಿ ಕರೋಗಿ’, ‘ಪಾರ್ಟ್ನರ್’, ‘ವಾಂಟೆಡ್’, ‘ದಬಾಂಗ್’ ಮುಂತಾದ ಚಲನಚಿತ್ರಗಳಿಗೆ ಸಹೋದರ ಸಾಜಿದ್ ಖಾನ್ ಜೊತೆಗೆ ಸೇರಿ ವಾಜಿದ್ ಖಾನ್ ಸಂಗೀತ ಸಂಯೋಜಿಸಿದ್ದರು.

Related