ದೆಹಲಿ: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್, ಪವಿತ್ರ ಗೌಡ ಸೇರಿದಂತೆ ಎಲ್ಲಾ ಆರೋಪಿಗಳಿಗೆ ಹೈಕೋರ್ಟ್ ನೀಡಿದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದು ಕೋರಿ ಆದೇಶ ಹೊರಡಿಸಿದೆ.
ಇಂದು (ಗುರುವಾರ ಆಗಸ್ಟ್ 14) ರಂದು ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದ್ದು, ದರ್ಶನ್ ಹಾಗೂ ಪವಿತ್ರ ಗೌಡರಿಗೆ ಮತ್ತೆ ಜೈಲು ಸೇರುವ ಪರಿಸ್ಥಿತಿ ಬಂದಿದೆ.
ಹೌದು, ಪವಿತ್ರಾಗೌಡ ಸೇರಿದಂತೆ ಎಲ್ಲಾ ಆರೋಪಿಗಳ ಜಾಮೀನು ರದ್ದುಗೊಳಿಸಿ ಸುಪ್ರೀಂ ಆದೇಶಿಸಿದ್ದು, ಕೂಡಲೇ ಎಲ್ಲಾ ಆರೋಪಿಗಳು ಶರಣಾಗಬೇಕು ಎಂದು ಸೂಚಿಸಿದೆ. ಶರಣಾಗದಿದ್ದರೇ ಕೂಡಲೇ ವಶಕ್ಕೆ ಪಡೆಯುವಂತೆ ಪೊಲೀಸರಿಗೆ ಕೋರ್ಟ್ ಸೂಚಿಸಿದೆ.
ಅಲ್ಲದೆ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಜೈಲಿನಲ್ಲಿ ದರ್ಶನ್ ಅವರಿಗೆ ಫೈವ್ ಸ್ಟಾರ್ ಟ್ರೀಟ್ಮೆಂಟ್ ನೀಡಲಾಗುತ್ತಿತ್ತು ಎಂದು ನಮಗೆ ತಿಳಿದಿದೆ. ಮತ್ತೆ ಈ ರೀತಿ ಯಾವುದೇ ಆರೋಪಿಗಳಿಗೆ 5 ಸ್ಟಾರ್ ಟ್ರೀಟ್ಮೆಂಟ್ ನೀಡಿದರೆ ಜೈಲು ಅಧಿಕಾರಿಗಳನ್ನು ಮುಲಾಜಿ ಇಲ್ಲದೆ ಸಸ್ಪೆಂಡ್ ಮಾಡುತ್ತೇವೆ ಎಂದು ಜೈಲು ಅಧಿಕಾರಿಗಳಿಗೆ ಸುಪ್ರೀಂಕೋರ್ಟ್ ಕಡಕ್ ಎಚ್ಚರಿಕೆಯನ್ನು ನೀಡಿದೆ. ಇದನ್ನೂ ಓದಿ: Breaking news: ದರ್ಶನ್, ಪವಿತ್ರಾಗೆ ಮತ್ತೆ ಜೈಲೂಟನೇ ಗತಿ
ರಾಜ್ಯ ಸರ್ಕಾರ ಯಾರಿಗಾದರೂ ವಿಐಪಿ ಟ್ರೀಟ್ಮೆಂಟ್ ನೀಡುತ್ತಿರುವ ಛಾಯಾಚಿತ್ರಗಳು ಅಥವಾ ಯಾವುದೇ ವೀಡಿಯೊವನ್ನು ನಾವು ನೋಡಿದರೆ ಮೊದಲು ನಿಮ್ಮನ್ನು ಸಸ್ಪೆಂಡ್ ಮಾಡಲಾಗುತ್ತದೆ ಎಂದು ಕೋರ್ಟ್ ಖಡಕ್ ವಾರ್ನಿಂಗ್ ನೀಡಿದೆ.
