ಅಕ್ರಮ ಚಟುವಟಿಕೆಗಳ ವಿರುದ್ದ ಕಠಿಣ ಕ್ರಮ

ಅಕ್ರಮ ಚಟುವಟಿಕೆಗಳ ವಿರುದ್ದ ಕಠಿಣ ಕ್ರಮ

ಬೆಂಗಳೂರು: ಕಾರಾಗೃಹಗಳಲ್ಲಿ ಅಕ್ರಮ ಚಟುವಟಿಕೆ, ಭ್ರಷ್ಟಾಚಾರ ಪ್ರಕರಣಗಳು ಕಂಡು ಬಂದರೆ ನಿರ್ದಾಕ್ಷಿಣ್ಯವಾಗಿ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ.

ಗುರುವಾರ ಕೇಂದ್ರ ಕಾರಾಗೃಹ ಕಚೆರಿಗೆ ಭೇಟಿ ನೀಡಿ ಕಾರಾಗೃಹಗಳ ಹಿರಿಯ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿ ಕಾರಾಗೃಹಗಳಲ್ಲಿ ಕೈದಿಗಳು ಮಾದಕ ವಸ್ತುಗಳನ್ನು ತೆಗೆದುಕೊಳ್ಳುವುದು, ಹೊರ ಜಗತ್ತಿನೊಂದಿಗೆ ವ್ಯವಹರಿಸಲು ಫೋನ್ ಸಂಪರ್ಕ ಸಾಧಿಸಿ ಹಣ ಸುಲಿಗೆ ನಡೆಸುತ್ತಿರುವುದು ಕಂಡುಬಂದರೆ ಅಂತವರ ವಿರುದ್ಧ ಕ್ರಮ ಕೈಗೊಳ್ಳಬೇಕು, ಅಕ್ರಮ ಚಟುವಟಿಕೆಗಳು ಜೈಲಿನ ಅಧಿಕಾರಿಗಳ ಜೊತೆ ಶಾಮೀಲಾಗಿ ನಡೆಸುವುದು ಕಂಡುಬಂದರೆ ಇಬ್ಬರ ಮೇಲೂ ಕಠಿಣ ಕ್ರಮ ಜರುಗಿಸಬೇಕೆಂದು ಹಿರಿಯ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ.

ಜೈಲುಗಳ ಹಾಗೂ ಕೈದಿಗಳ ಸ್ವಚ್ಛತೆ ಬಗೆಗೆ ಆದ್ಯತೆ ನೀಡಬೇಕು. ಜೈಲಿನಿಂದ ಹೊರ ಬರುವಾಗ ಕೈದಿ ಪರಿವರ್ತನೆಗೊಂಡು ಸಮಾಜಕ್ಕೆ ಉತ್ತಮ ಕೊಡುಗೆ ನೀಡುವಂತಾಗೇಕು ಎಂದರು. ಈ ವೇಳೆ ಕರ್ನಾಟಕ ಕಾರಾಗೃಹ ಇಲಾಖೆ ಮುಖ್ಯಸ್ಥ ಶ್ರೀ ಅಲೋಕ್ ಮೋಹನ್ ಒಳಗೊಂಡಂತೆ ಹಿರಿಯ ಅಧಿಕಾರಿಗಳು ಹಾಜರಿದ್ದರು.

Related