ಕಲ್ಯಾಣ ಕರ್ನಾಟಕ ಉತ್ಸವಕ್ಕೆ : ಸಿಎಂ ಚಾಲನೆ

ಕಲ್ಯಾಣ ಕರ್ನಾಟಕ ಉತ್ಸವಕ್ಕೆ : ಸಿಎಂ ಚಾಲನೆ

ಕಲಬುರಗಿ : ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ನಗರದ ಡಿಎಆರ್ ಪೊಲೀಸ್ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಬಂದ ಅವರು, ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು, ನಂತರ ಪೊಲೀಸ್ ಡಿಎಆರ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡರು.

ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ಸೇಡಂ, ಸಂಸದ ಡಾ.ಉಮೇಶ ಜಾಧವ, ಕರ್ನಾಟಕ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ಟೆಂಗಳಿ ಡಾ. ಅವಿನಾಶ ಜಾಧವ, ಹಾಗೂ ಇತರ ಪ್ರತಿನಿಧಿಗಳು ಇದ್ದರು.

Related