ಕಲ್ಯಾಣ ಕರ್ನಾಟಕ ಸಾರಿಗೆ ನಿಗಮ

ಕಲ್ಯಾಣ ಕರ್ನಾಟಕ ಸಾರಿಗೆ ನಿಗಮ

ಬೆಂಗಳೂರು : ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹೆಸರನ್ನು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಎಂದು ಮರುನಾಮಕರಣ ಮಾಡಲಾಗಿದೆ.

ಬೀದರ್, ಬಳ್ಳಾರಿ, ಕಲಬುರಗಿ, ಕೊಪ್ಪಳ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳು ಒಳಗೊಂಡಿರುವ ಹೈದರಾಬಾದ್- ಕರ್ನಾಟಕ ಪ್ರದೇಶಕ್ಕೆ ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣವಾಗಿರುವ ಹಿನ್ನೆಲೆಯಲ್ಲಿ ಇದೀಗ ಹೊಸ ಹೆಸರು ಸಾರಿಗೆ ಸಂಸ್ಥೆಗೆ ಇಡಲಾಗಿದೆ.

ತಕ್ಷಣದಿಂದ ಜಾರಿಗೆ ಬರುವಂತೆ ಈ ಆದೇಶ ಹೊರಡಿಸಲಾಗಿದೆ ಎಂದು ಉಪಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.

ಹೈದರಾಬಾದ್- ಕರ್ನಾಟಕ ಪ್ರದೇಶವು ಕಲ್ಯಾಣ ಕರ್ನಾಟಕ ಎಂದು ನಾಮಕರಣವಾಗಿರುವುದು 2019ರ ಸೆಪ್ಟೆಂಬರ್‌ನಲ್ಲಿ. ಅಂದಿನಿಂದ ರಸ್ತೆ ಸಾರಿಗೆ ಸಂಸ್ಥೆಯ ಹೆಸರನ್ನೂ ಬದಲಾಯಿಸಬೇಕು ಎಂಬ ಬಗ್ಗೆ ಒತ್ತಡಗಳು ಬಂದಿದ್ದವು.

Related