ಪ್ರಜ್ವಲ್ ರೇವಣ್ಣ ಪೆನ್ ಡ್ರೈ ಪ್ರಕರಣಕ್ಕೆ ಬಿಜೆಪಿ ನಾಯಕರು ಹೇಳಿದ್ದೇನು..?

ಪ್ರಜ್ವಲ್ ರೇವಣ್ಣ ಪೆನ್ ಡ್ರೈ ಪ್ರಕರಣಕ್ಕೆ ಬಿಜೆಪಿ ನಾಯಕರು ಹೇಳಿದ್ದೇನು..?

ಬೆಂಗಳೂರು: ಹಾಲಿ ಸಂಸದ ಪ್ರಜ್ವಲ್ ರೇವಣ್ಣ  ಅವರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ ನಡೆಸುತ್ತಿದ್ದಾರೆ ಎಂಬ ಆರೋಪ ರಾಜ್ಯ ರಾಜಕೀಯದಲ್ಲಿ ಬಿಸಿಬಿಸಿಯಾಗಿ ಚರ್ಚೆ ಆಗುತ್ತಿದ್ದು, ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಪ್ರಜ್ವಲ್ ರೇವಣ್ಣ ಅವರ ಸುದ್ದಿ ಈಗ ಕಾಂಗ್ರೆಸ್ ಪಕ್ಷಕ್ಕೆ ಹಸಿದ ಬಾಯಿಗೆ ಆಹಾರ ಸಿಕ್ಕಂತಾಗಿದೆ.

ಹೌದು, ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಹಗರಣ ವಿಚಾರ ರಾಜ್ಯ ರಾಜಕೀಯ  ಬಾರಿ ಚರ್ಚೆಯಾಗುತ್ತಿದ್ದು, ಮೇ 7ರಂದು 14 ಕ್ಷೇತ್ರಗಳಿಗೆ ಚುನಾವಣೆ ನಡೆಯುವುದು ಬಾಕಿ ಇರುವುದರಿಂದ ಜೆಡಿಎಸ್ ಮಿತ್ರ ಪಕ್ಷವಾಗಿ ಬಿಜೆಪಿಗೆ ಈ ವಿಚಾರ ಮಗ್ಗುಲ ಮುಳ್ಳಾಗುತ್ತಿರುವಂತೆ ತೋರುತ್ತಿದೆ. ಈ ಪ್ರಕರಣದಲ್ಲಿ ತಪ್ಪಿತಸ್ಥರು ಯಾರೇ ಆದರೂ ಪಕ್ಷದಿಂದ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಕುಮಾರಸ್ವಾಮಿ ಹೇಳಿದ್ದಾರೆ. ಇನ್ನು, ಈ ಬಗ್ಗೆ ಪ್ರಕ್ರಿಯಿಸಿರುವ ಬಿಜೆಪಿಯ ಕೆಲ ನಾಯಕರು, ಕಾನೂನು ಎಲ್ಲರಿಗೂ ಒಂದೇ ಇರುತ್ತದೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ವಿಪಕ್ಷ ನಾಯಕ ಆರ್. ಅಶೋಕ್, ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ಎಲ್ಲರೂ ಸಮಾನರು ಎಂದು ಹೇಳಿದ್ದಾರೆ. ಎಚ್.ಡಿ. ಕುಮಾರಸ್ವಾಮಿ ಅವರು ಈ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ಸರ್ಕಾರ ಎಸ್​ಐಟಿ ರಚಿಸಿದೆ. ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿ ಎಂದು ಅಶೋಕ್ ಹೇಳಿದ್ದಾರೆ. ಇನ್ನು, ಪೆನ್ ಡ್ರೈವ್ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂತ್ರಸ್ತೆಯರಿಗೆ ರಕ್ಷಣೆ ಇಲ್ಲ ಎನ್ನುವ ಡಿ.ಕೆ. ಸುರೇಶ್ ಹೇಳಿಕೆಗೆ ಪ್ರತಿಕ್ರಿಯಿಸಿದ ಆರ್ ಅಶೋಕ್, ಈಗ ರಾಜ್ಯದಲ್ಲಿ ಅವರದ್ದೇ ಸರ್ಕಾರ ಇದೆಯಲ್ಲ, ರಕ್ಷಣೆ ಕೊಡಲಿ ಎಂದು ಆಗ್ರಹಿಸಿದ್ದಾರೆ.

 

Related