ಸಿಎಂ ಮಹತ್ವದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದೇನು?

ಸಿಎಂ ಮಹತ್ವದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದೇನು?

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಎಲ್ಲಾ ಜಿಲ್ಲಾ ಅಧಿಕಾರಿಗಳು ಮಳೆಗೆ ಯಾವುದೇ ಹಾನಿಯಾಗದಂತೆ ಮುನ್ನೆಚ್ಚರಿಕೆ ಕ್ರಮವನ್ನು ವಹಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ತಾಲೂಕು ಜಿಲ್ಲಾ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ.

ಇನ್ನು ವಿಡಿಯೋ ಕಾನ್ಫರೆನ್ಸ್ ಬಳಿಕ ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿದ ಅವರು, ಹವಾಮಾನ ಇಲಾಖೆಯವರು ಈಗಾಗಲೇ ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆ ಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:  ಅರ್ಜುನನ ಸಮಾಧಿ ರಕ್ಷಣೆಗೆ ಮುಂದಾದ ಅರಣ್ಯ ಇಲಾಖೆ

ಹಾಗಾಗಿ ಹೆಚ್ಚು ಮಳೆಯಾಗಿ ಪ್ರವಾಹ ಏನಾದರೂ ಬಂದರೆ ಇದಕ್ಕೆ ಜಿಲ್ಲಾ ಆಡಳಿತವರು ಪ್ರವಾಹವನ್ನು ಎದುರಿಸಲು ಸನ್ನದ್ಧರಾಗಿರಬೇಕು. ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು. ಪ್ರವಾಹ ಬರುವ ಮುಂಚಿತವಾಗಿ ರಸ್ತೆ ಸರಿಪಡಿಸುವುದು ಕೆರೆ ಕುಂಟೆಗಳನ್ನು ಸರಿಪಡಿಸುವ ಕಾರ್ಯವನ್ನು ಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಇನ್ನು ಮುಂಜಾಗ್ರತಾ ಕ್ರಮವಾಗಿ, ಹೂಳೆವ ಕೆಲಸ ಅರಂಭಿಸಿ ನೀರು ಸರಾಗವಾಗಿ ಕೆರೆಕುಂಟೆಗಳಿಗೆ ಹರಿದುಹೋಗುವಂತೆ ಮಾಡುವುದು, ನದಿ ನೀರುಹರಿವಿಗೆ ಅಡೆತಡೆಗಳು ಉಂಟಾಗಿದ್ದರೆ ಅವುಗಳನ್ನು ನಿವಾರಿಸುವುದು-ಒಟ್ಟಿನಲ್ಲಿ ಜನರಿಗೆ ತೊಂದರೆಯಾಗುವುದನ್ನು ತಪ್ಪಿಸಲು ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

Related