ಕೊಲೆ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ದರ್ಶನ್ ಬಗ್ಗೆ ಡಿಸಿಎಂ ಹೇಳಿದ್ದೇನು..?

ಕೊಲೆ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ದರ್ಶನ್ ಬಗ್ಗೆ ಡಿಸಿಎಂ ಹೇಳಿದ್ದೇನು..?

ಬೆಂಗಳೂರು: ನಟ ದರ್ಶನ್ ಈಗಾಗಲೇ ಕೊಲೆ ಪ್ರಕರಣದಲ್ಲಿ ಕಳೆದ ಮೂರು ದಿನಗಳಿಂದ ಪೊಲೀಸ್ ಅತಿಥಿಯಾಗಿದ್ದು, ಇದೀಗ ಈ ಪ್ರಕರಣದಿಂದ ಹೊರ ಬರಲು ನಟ ದರ್ಶನ್ ಪ್ರಭಾವಿ ರಾಜಕಾರಣಿಗಳ ಸಂಪರ್ಕ ಮಾಡಿದ್ದಾರೆ ಎಂಬ ಮಾಹಿತಿ ಬಾರಿ ಗ್ರಾಸವಾಗಿ ಚರ್ಚೆಯಾಗುತ್ತಿದೆ.

ಇನ್ನು ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಕೇಸ್ನಿಂದ ಹೊರಬರಲು ನಟ ದರ್ಶನ್ ಪ್ರಭಾವಿ ರಾಜಕಾರಣಿಯಾದ ಡಿಕೆ ಶಿವಕುಮಾರ್ ಅವರಿಗೆ ಕರೆ ಮಾಡಿದ್ದಾರೆ ಎನ್ನುವ ಚರ್ಚೆ ಎಲ್ಲೆಡೆ ಬಾರಿ ಚರ್ಚೆಯಾಗುತ್ತಿದೆ. ಇದನ್ನೂ ಓದಿ: ವಿ. ಸೋಮಣ್ಣ ಟೆಂಪಲ್ ರನ್

ಇನ್ನು ಇದರ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯೆ ಸಿದ್ದು, ನನ್ನ ಪ್ರಕರಣದ ಅನುಭವದಲ್ಲೇ ಹೇಳುವುದಾದರೆ, ಅಧಿಕಾರಿಗಳು ನನ್ನನ್ನು ನ್ಯಾಯಾಲಯಕ್ಕೆ ಕರೆದುಕೊಂಡು ಹೋಗುವಾಗ ಜನರಿಗೆ ಮರೆಮಾಚಿ ಕರೆದುಕೊಂಡು ಹೋಗುವರು.

ಕೆಲವು ಬಾರಿ ಅಭಿಮಾನಿಗಳು ಅಡ್ಡಬರುವುದು, ಜೈಕಾರ ಕೂಗುವುದು ಅಥವಾ ಯಾರಾದರೂ ಕಲ್ಲು ಎಸೆಯಬಹುದು ಎಂಬ ಕಾರಣಕ್ಕೆ ಪೊಲೀಸ್ ಅಧಿಕಾರಿಗಳು ಆ ರೀತಿ ಮಾಡುತ್ತಾರೆ. ಈ ಪ್ರಕರಣದಲ್ಲಿ ಪೊಲೀಸರು ಇದೇ ರೀತಿ ಮುನ್ನಚ್ಚರಿಕೆ ಕ್ರಮ ತೆಗೆದುಕೊಂಡಿರಬಹುದು. ನನಗೆ ಮಾಹಿತಿ ಇಲ್ಲ ಎಂದು ಡಿ ಕೆ ಶಿವಕುಮಾರ್‌ ಹೇಳಿದರು.

ಈ ಪ್ರಕರಣ ರಾಜ್ಯ ಸರ್ಕಾರ ಮುಚ್ಚಿಹಾಕಲು ಪ್ರಯತ್ನಿಸಿದರೆ ನಾನು ಮಧ್ಯಪ್ರವೇಶಿಸಬೇಕಾಗುತ್ತದೆ ಎಂಬ ಕುಮಾರಸ್ವಾಮಿ ಅವರ ಎಚ್ಚರಿಕೆ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿ ಅವರು, ಈಗಲೂ ಅವರು ಮಧ್ಯಪ್ರವೇಶಿಸಲಿ. ಯಾರು ಬೇಕಾದರೂ ಮಧ್ಯಪ್ರವೇಶ ಮಾಡಲಿ ಎಂದು ತಿಳಿಸಿದರು.

 

 

Related