ಬೆಂಗಳೂರು: ಪಿಯುಸಿ ಪರೀಕ್ಷೆ ಮುಗಿದ ನಂತರ ವೃತ್ತಿಪರ ಕೋರ್ಸ್ ಗಳಿಗಾಗಿ ವಿದ್ಯಾರ್ಥಿಗಳು ಎಲ್ಲಾ ರೀತಿ ತಯಾರಿ ಮಾಡಿಕೊಂಡು ತಮ್ಮ ಮುಂದಿನ ವಿದ್ಯಾಭ್ಯಾಸಕ್ಕೆ ಸಿಇಟಿ ಅಥವಾ ಜೆಇ ಪರೀಕ್ಷೆಯನ್ನು ಬರೆಯುತ್ತಾರೆ.
ಅದರಂತೆ ಕರ್ನಾಟಕ ರಾಜ್ಯದಲ್ಲಿ ವೃತ್ತಿಪರ ಕೋರ್ಸ್ ಗಳಿಗೆ ಏಪ್ರಿಲ್ 15ರಿಂದ 17ರವರೆಗೆ ಸಿಇಟಿ ಪರೀಕ್ಷೆ ಪ್ರಾರಂಭವಾಗಿದ್ದು, ಸಾಮಾನ್ಯವಾಗಿ ಪರೀಕ್ಷೆ ವೇಳೆ ತಪಾಸನೆ ಮಾಡುವುದು ಸರ್ವೇಸಾಮಾನ್ಯ ಆದರೆ ತಪಾಸಣೆ ವೇಳೆ ಶಿವಮೊಗ್ಗ ಹಾಗೂ ಬೀದರ್ ನಲ್ಲಿ ಜನಿವಾರ ತೆಗೆದು ಹಾಕುವಂತೆ ಸೂಚಿಸಿರೋದು ಇದೀಗ ರಾಜ್ಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.
ಹೌದು, ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ಸಿಟಿ ಪರೀಕ್ಷೆ ನಡೆದಿದ್ದು, ಕೊನೆಯ ದಿನವಾದ ಏಪ್ರಿಲ್ 17ರಂದು ಶಿವಮೊಗ್ಗ ಮತ್ತು ಬೀದರ್ ನಲ್ಲಿ ಪರೀಕ್ಷೆ ತಪಾಸಣೆ ವೇಳೆ ಜನಿವಾರವನ್ನು ತೆಗೆದಿರಿ ಎಂದು ಹೇಳಿರುವ ಮಾತು ಇದೀಗ ರಾಜ್ಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದ್ದು, ಈ ಕುರಿತು ಇದೀಗ ಉನ್ನತ ಶಿಕ್ಷಣ ಸಚಿವರಾಗಿರುವಂತಹ ಡಾ. ಸುಧಾಕರ್ ಅವರು ಪ್ರತಿಕ್ರಿಯಿಸಿದ್ದಾರೆ.
ಸಿಇಟಿ ಅಭ್ಯರ್ಥಿಯ ಜನಿವಾರ ತೆಗೆಸಿದ್ದು ನಿಜವೇ ಆದರೆ ಅದು ಅತಿರೇಕದ ವರ್ತನೆ. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ. ಯಾವುದೇ ಕೇಂದ್ರದಲ್ಲಿ ಆ ರೀತಿ ಆಗಿದ್ದರೆ ಗಂಭೀರವಾಗಿ ಪರಿಗಣಿಸುತ್ತೇವೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಬಸವಣ್ಣನವರು ಸಮಾಜಕ್ಕಾಗಿ ಬದುಕಿದವರು: ಸಿಎಂ
ಎಲ್ಲಾ ಜಾತಿ, ಧರ್ಮಗಳ ಆಚರಣೆ ಸಂಪ್ರದಾಯಕ್ಕೆ ಗೌರವ ಕೊಡಬೇಕು. ನಾನು ಈ ರೀತಿಯ ಘಟನೆಗಳಿಗೆಲ್ಲ ಪ್ರೋತ್ಸಾಹ ಕೊಡುವುದಿಲ್ಲ. ಘಟನೆ ಸಂಬಂಧ ಅಧಿಕಾರಿಗಳ ಬಳಿ ವರದಿ ಪಡೆದು, ಮುಂದೆ ಏನು ಮಾಡಬಹುದು ಎಂದು ಯೋಚಿಸುತ್ತೇನೆ.
ಆ ರೀತಿ ಆಗಿದ್ದು ಸತ್ಯವೇ ಆದರೆ ಇನ್ನೊಮ್ಮೆ ಪರಿಶೀಲನೆ ಮಾಡುತ್ತೇನೆ. ಆಯ್ದ ವಿಚಾರ ಎತ್ತಿಕೊಂಡು ರಾಜಕೀಯ ಲಾಭ ಮಾಡುವುದಲ್ಲ. ಯಾವುದೇ ಸಮುದಾಯವನ್ನು ನೋವಿಸುವ ಉದ್ದೇಶ ನಮ್ಮದಲ್ಲ ಎಂದು ಹೇಳಿದ್ದಾರೆ.
ಇದನ್ನು ದಯವಿಟ್ಟು ಯಾರೂ ಕೂಡ ರಾಜಕೀಯವಾಗಿ ಬಳಸಿಕೊಳ್ಳಬೇಡಿ ಎಂದು ಮನವಿ ಮಾಡಿದ್ದಾರೆ.
