ಸಿದ್ದರಾಮಯ್ಯ ಬಿಜೆಪಿಯ ಹೈಕಮಾಂಡ್ ಏನು?

ಸಿದ್ದರಾಮಯ್ಯ ಬಿಜೆಪಿಯ ಹೈಕಮಾಂಡ್ ಏನು?

ಬೀದರ್ : ಬಿ.ಎಸ್ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಬೃಹತ್ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಹೇಳಿದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾಗಲಿದ್ದಾರೆ ಎಂದು ಹೇಳಲು ಸಿದ್ದರಾಮಯ್ಯ ಬಿಜೆಪಿಯ ಹೈಕಮಾಂಡ್ ಏನು? ಸಿದ್ದರಾಮಯ್ಯ ಅವರಿಗೆ ಯಡಿಯೂರಪ್ಪ ಅವರ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ. ಬೇಕಿದ್ದರೆ ರಚನಾತ್ಮಕ ಸಲಹೆ ಸೂಚನೆಗಳನ್ನು ಕೊಡಲಿ ಎಂದು ನಗರದಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದರು.

ಕಾಂಗ್ರೆಸ್ ಅಧೋಗತಿಗೆ ಇಳಿದಿದೆ. ಮೊದಲು ಡಿ.ಕೆ.ಶಿವಕುಮಾರ ಹಾಗೂ ಸಿದ್ದರಾಮಯ್ಯ ನಡುವಿನ  ಸಂಬಂಧಗಳನ್ನು  ಸರಿಪಡಿಸಿಕೊಳ್ಳರಿ, ನಂತರ ಬೇರೆ ಪಕ್ಷದ ಬಗ್ಗೆ ವಿಚಾರ ಮಾಡಲಿ ಎಂದು ಕಾಂಗ್ರೆಸ್ ಮುಖಂಡರಿಗೆ ಸಲಹೆ ನೀಡಿದರು.

ಸಚಿವ ಸಂಪುಟಕ್ಕೆ ಎಷ್ಟು ಜನ ಸೇರಿಸಿಕೊಳ್ಳಬೇಕು ಎನ್ನುವುದು ಮುಖ್ಯಮಂತ್ರಿ ಪರಮಾಧಿಕಾರಕ್ಕೆ ಬಿಟ್ಟ ವಿಚಾರ. ಸಂಪುಟಕ್ಕೆ ಎಷ್ಟು ಜನ ಸೇರಿಸಿಕೊಳ್ಳಲಿದ್ದಾರೆ ಎನ್ನುವ ಹೆಸರುಗಳನ್ನು ಅವರೇ ಪ್ರಕಟಿಸಲಿದ್ದಾರೆ ಎಂದು ತಿಳಿಸಿದರು.

Related