ಲಕ್ಷ್ಮಣ ಸವದಿಯ ಮುಂದಿನ ನಡೆ ಏನು?

ಲಕ್ಷ್ಮಣ ಸವದಿಯ ಮುಂದಿನ ನಡೆ ಏನು?

ಬೆಳಗಾವಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಪಕ್ಷಕ್ಕೆ ಮರು ಸೇರ್ಪಡೆಯಾಗಿರುವುದರಿಂದ ಕಾಂಗ್ರೆಸ್ ನ ಹೈಕಮಾಂಡ್ ಫುಲ್ ಅಲರ್ಟ್ ಆಗಿದೆ.

ಹೌದು, ಜಗದೀಶ್ ಶೆಟ್ಟರ್ ಬಿಜೆಪಿ ಮರು ಸೇರ್ಪಡೆಯಿಂದ ಮತ್ತೆ ಕಾಂಗ್ರೆಸ್ ನ ಶಾಸಕ ಲಕ್ಷ್ಮಣ್ ಸವದಿ, ಬಿಜೆಪಿಗೆ ಮರು ಸೇರ್ಪಡೆ ಯಾಗುತ್ತಾರೆ ಎಂಬ ಚರ್ಚೆ ಈಗಾಗಲೇ ರಾಜ್ಯ ರಾಜಕೀಯದಲ್ಲಿ ಗ್ರಾಸವಾಗಿ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಕಾಂಗ್ರೆಸ್  ಹೈಕಮಾಂಡ್ ಲಕ್ಷ್ಮಣ್ ಸವದಿ ಅವರ ಜೊತೆ ನಿರಂತರ ಸಂಪರ್ಕವನ್ನು ಹೊಂದಿದ್ದಾರೆ ಎಂದು ತಿಳಿದುಬಂದಿದೆ.

ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾದವರನ್ನ ಪಕ್ಷದಲ್ಲೇ ಉಳಿಸಿಕೊಳ್ಳಲು ಪ್ರಯತ್ನ ನಡೆಸಲಾಗುತ್ತಿದೆ. ಲೋಕಸಭೆ ಚುನಾವಣೆ ಹೊತ್ತಲ್ಲಿ ಪಕ್ಷ ಬಿಟ್ಟು ಹೋಗದಂತೆ ನೋಡಿಕೊಳ್ಳಲು ಕಾಂಗ್ರೆಸ್ ನಾನಾ ಸರ್ಕಸ್ ಮಾಡುತ್ತಿದೆ. ಶಾಸಕ ಲಕ್ಷ್ಮಣ ಸವದಿ ಕೂಡ ಪಕ್ಷ ಬಿಡದಂತೆ ಕೈ ನಾಯಕರು ಎಚ್ಚರಿಕೆ ವಹಿಸಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು ಶಾಸಕ ಲಕ್ಷ್ಮಣ ಸವದಿ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ಸವದಿಗೆ ಕರೆ ಮಾಡಿ ಚರ್ಚೆ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ ಬಿಡದಂತೆ ಮತ್ತು ಸೂಕ್ತ ಸ್ಥಾನಮಾನ ನೀಡುವುದಾಗಿ ಸವದಿಗೆ ಭರವಸೆ ನೀಡಿದ್ದಾರೆ. ಮುಂದಿನ ವಾರ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಅವರು ಲಕ್ಷ್ಮಣ ಸವದಿ ಅವರನ್ನು ಭೇಟಿಯಾಗುವ ಸಾಧ್ಯತೆ ಇದೆ. ದೆಹಲಿಯಲ್ಲಿ ಸುರ್ಜೇವಾಲ ಭೇಟಿ ವೇಳೆ ಕೆಲ ಬೇಡಿಕೆ ಇಡಲು ಸವದಿ ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಹಾಗಾದರೆ ಮುಂಬರುವ ಲೋಕಸಭಾ ಚುನಾವಣೆ ಒಳಗಾಗಿ ಕಾಂಗ್ರೆಸ್ ನ ಶಾಸಕ ಲಕ್ಷ್ಮಣ್ ಸವದಿ ಕಾಂಗ್ರೆಸ್ ನಲ್ಲೇ ಇರ್ತಾರ ಅಥವಾ ಮತ್ತೆ ಬಿಜೆಪಿಗೆ ಮರು ಸೇರ್ಪಡೆಯಾಗುತ್ತಾರೆ ಎಂದು ಕಾದು ನೋಡಬೇಕಿದೆ.

Related