Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮಲೆಮಹದೇಶ್ವರ ಅರಣ್ಯದಲ್ಲಿ ಹುಲಿಗಳು ಮರಣ ಹೊಂದಲು ಕಾರಣವೇನು?
  • Crime
  • State

ಮಲೆಮಹದೇಶ್ವರ ಅರಣ್ಯದಲ್ಲಿ ಹುಲಿಗಳು ಮರಣ ಹೊಂದಲು ಕಾರಣವೇನು?

admin June 27, 2025 1 minute read
Spread the love

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯ ಧಾಮದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ಐದು ಹುಲಿಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮನಕಲಕುವಂತಿದೆ. ಪುಟ್ಟ ಪುಟ್ಟ ಹುಲಿ ಮರಿಗಳು ಸಾವನ್ನುಪ್ಪಿರುವುದನ್ನು ನೋಡಿ ಸ್ಥಳೀಯರು ಕಣ್ಣೀರು ಹಾಕಿದ್ದಾರೆ.

ತಾಯಿ ಮಕ್ಕಳು ಸೇರಿ 5 ಹುಲಿಗಳು ಸಾವನ್ನುಪ್ಪಿರುವ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅರಣ್ಯ ಅಧಿಕಾರಿಗಳಿಗೆ ಕ್ರಮಬದ್ಧವಾಗಿ ವಿಚಾರಣೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ವಿಧಿಸುವಂತೆ ತಿಳಿಸಿದೆ.

ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ಕೊಟ್ಟಿದ್ದಾರೆ. ಇನ್ನೂ, ಹುಲಿಗಳು ವಿಷ ಪ್ರಶಾನದ ಸೇವಿಸಿ ಮೃತಪಟ್ಟಿವೆ ಎಂದು ಶಂಕಿಸಲಾಗಿದೆ. ಇನ್ನೂ, ಪಿಸಿಸಿಎಫ್ ನೇತೃತ್ವದಲ್ಲಿ ತನಿಖೆ ನಡೆಸಲು ಅರಣ್ಯ ಸಚಿವ ಈಶ್ವರ ಖಂಡ್ರೆ ಆದೇಶ ಹೊರಡಿಸಿದ್ದಾರೆ.

ಅಲ್ಲದೇ ತನಿಖೆ ನಡೆಸಿ ವರದಿ ನೀಡುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಜೊತೆಗೆ ಅರಣ್ಯ ಸಿಬ್ಬಂದಿ ನಿರ್ಲಕ್ಷ್ಯ ಇದ್ದರೆ ಶಿಸ್ತು ಕ್ರಮಕ್ಕೆ ಸೂಚನೆ ನೀಡಿದ್ದಾರೆ. ವಿಷಪ್ರಾಶಾನವಾಗಿದ್ದರೆ ಸಂಬಂಧಿಸಿದವರ ವಿರುದ್ಧ ಕ್ರಿಮಿನಲ್ ಪ್ರಕರಣಕ್ಕೆ ದಾಖಲಿಸಲು ಸೂಚನೆ ಕೊಟ್ಟಿದ್ದಾರೆ.

ಇನ್ನು ಹುಲಿಗಳ ಮರಣೋತ್ತರ ಪರೀಕ್ಷೆ ಇಂದು (ಶುಕ್ರವಾರ ಜೂನ್‌ 27) ನಡೆಯಲಿದ್ದು, ವರದಿ ಕೈಸೇರಿದ ಬಳಿಕ ಸಾವಿಗೆ ನಿಖರ ಕಾರಣ ಏನೆಂಬುದು ಗೊತ್ತಾಗಲಿದೆ. ಇದನ್ನೂ ಓದಿ: ಕೆಂಪೇಗೌಡರಿಗೆ ಪುಷ್ಪಾರ್ಚನೆ ಮಾಡಿದ ಡಿಕೆಶಿ

ಹುಲಿ ಸಾವು ಸಂಬಂಧ ಮೀಣ್ಯಂ ಅರಣ್ಯ ಪ್ರದೇಶ ಸಮೀಪದ ಗ್ರಾಮಸ್ಥರನ್ನೂ ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಪೊಲೀಸರು ಗ್ರಾಮಸ್ಥರನ್ನು ಘಟನಾ ಸ್ಥಳಕ್ಕೆ ಕರೆದುಕೊಂಡು ಹೋಗಿ ಮಾಹಿತಿ ಕಲೆಹಾಕುತ್ತಿದ್ದಾರೆ. ಹಸುವಿನ ಕಳೇಬರದ ಬಳಿ ಕರೆದುಕೊಂಡು ಹೋಗಿ ಯಾರು ಅದರ ಮಾಲೀಕರು ಎಂಬುದನ್ನೂ ವಿಚಾರಣೆ ಮಾಡಲಾಗುತ್ತಿದೆ.

ಹುಲಿಗಳ ಮೃತದೇಹಗಳು ದೊರೆತ ಸ್ಥಳದಲ್ಲಿಯೇ ಹಸುವಿನ ಶವ ಕೂಡ ಸಿಕ್ಕಿದ್ದು, ಹುಲಿಗಳಿಗೆ ವಿಶಪ್ರಾಷನ ಮಾಡಿಸಿರುವ ಶಂಕೆಗೆ ಕಾರಣವಾಗಿದೆ. ಹಸುವಿನ ಮೃತ ದೇಹದ ಬಾಲ ತುಂಡಾಗಿರುವುದು ಕಂಡು ಬಂದಿದೆ. ಹೀಗಾಗಿ, ಸತ್ತ ಹಸುವಿಗೆ ಯಾರೋ ವಿಷ ಸಿಂಪಡಿಸಿರುವ ಸಾಧ್ಯತೆ ಇದೆ. ಅದನ್ನು ತಿಂದು ಹುಲಿ ಮತ್ತು ಹುಲಿ ಮರಿಗಳು ಮೃತಪಟ್ಟಿರಬಹುದು ಎಂದು ಮೇಲ್ನೋಟಕ್ಕೆ ಶಂಕಿಸಲಾಗಿದೆ. ಮರಣೋತ್ತರ ಪರೀಕ್ಷೆ ವರದಿ ನಂತರ ಸತ್ಯ ಏನೆಂಬುದು ಗೊತ್ತಾಗಲಿದೆ.

 

About the Author

admin

Administrator

Visit Website View All Posts

Spread the love

Post navigation

Previous: ಕೆಂಪೇಗೌಡರಿಗೆ ಪುಷ್ಪಾರ್ಚನೆ ಮಾಡಿದ ಡಿಕೆಶಿ
Next: 5 ಹುಲಿ ಸಾ*ವು; ಶಂಕಿತರನ್ನ ವಶಕ್ಕೆ ಪಡೆದ ತನಿಖಾಧಿಕಾರಿಗಳು

Views:

11

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.