ಸೇತುವೆ ದುರಸ್ತಿ ಯಾವಾಗ?

ಸೇತುವೆ ದುರಸ್ತಿ ಯಾವಾಗ?

ಜೇವರ್ಗಿ : ಪಟ್ಟಣದ ವಿಜಯಪುರ ರಸ್ತೆಯಲ್ಲಿನ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಶಾಲೆ, ಲೋಕೋಪಯೋಗಿ ಇಲಾಖೆ ಕಚೇರಿ ಮತ್ತು ಸರ್ಕಾರಿ ವಸತಿ ಗೃಹಗಳಿಗೆ ತೆರಳುವ ಮುಖ್ಯ ರಸ್ತೆಯ ಮಧ್ಯದಲ್ಲಿ ಹಳ್ಳಕ್ಕೆ ನಿರ್ಮಿಸಿದ ಸೇತುವೆ ಮಳೆ ನೀರಿಗೆ ಕೊಚ್ಚಿಕೊಂಡು ಹೋಗಿದೆ.

ಸೇತುವೆ ಹಾಳಾಗಿ ಮೂರು ತಿಂಗಳು ಗತಿಸಿದರೂ, ಇದುವರೆಗೆ ಪುನರ್ ನಿರ್ಮಾಣಕ್ಕೆ ಸ್ಥಳೀಯ ಪುರಸಭೆ ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿವೆ.

ಸೇತುವೆ ಕೊಚ್ಚಿ ಹೋಗಿರು ವುದರಿಂದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ತೆರಳುವ ವಿದ್ಯಾರ್ಥಿಗಳು, ಪ್ರತಿ ದಿನ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ತಹಶೀಲ್ದಾರ್ ಸಿದರಾಯ ಭೋಸಗಿ ಅಧಿಕಾರಿಗಳೊಂದಿಗೆ ಚರ್ಚಿಸಿ ತಾತ್ಕಾಲಿಕ ವಾಗಿ ಸೇತುವೆದುರಸ್ತಿಗೊಳಿಸಿದ್ದರು.

ಮಾಜಿ ಮುಖ್ಯಮಂತ್ರಿ ಎನ್. ಧರ್ಮಸಿಂಗ್ ಅವರು ಲೋಕೋಪಯೋಗಿ ಸಚಿವರಾಗಿದ್ದ ಸಂದರ್ಭದಲ್ಲಿ ಈ ಸೇತುವೆಯನ್ನು ನಿರ್ಮಿಸಲಾಗಿತ್ತು. ಇದಾದ ನಂತರ ಹತ್ತಾರು ಬಾರಿ ಮಳೆಗೆ ಸೇತುವೆ ಕೊಚ್ಚಿಹೋಗಿದೆ ಎಂದು ಶಾಸಕ ಡಾ. ಅಜಯಸಿಂಗ್ ಅವರು ಕೊಚ್ಚಿಹೋದ ಸೇತುವೆ ದುರಸ್ತಿಗೊಳಿಸಲು ಮುತುವರ್ಜಿ ವಹಿಸಬೇಕು ಎಂಬುದು ಬಡಾವಣೆ ನಾಗರಿಕರ ಆಗ್ರಹಿಸಿದ್ದರು.

Related