ಹಿಜಾಬ್ ಹಾಕಿದ್ರೆ ಎಲ್ಲಿರುತ್ತೆ ಸಮಾನತೆ: ಯತ್ನಾಳ್!

ಹಿಜಾಬ್ ಹಾಕಿದ್ರೆ ಎಲ್ಲಿರುತ್ತೆ ಸಮಾನತೆ: ಯತ್ನಾಳ್!

ವಿಜಯಪುರ: ರಾಜ ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ಮತ್ತೆ ಹಿಜಾಬ್ ದಂಗಲ್ ಶುರುವಾಗಿದ್ದು ಶಾಲಾ-ಕಾಲೇಜುಗಳಿಗೆ ಸಮವಸ್ತ್ರ ಕಡ್ಡಾಯವೆಂದು ಬಿಜೆಪಿ ನಾಯಕರುಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಗುಡುಗುತ್ತಿದ್ದಾರೆ.

ಇನ್ನು ಇದರ ಬಗ್ಗೆ ಪ್ರತಿಕ್ರಿಯೆ ನೀಡಿದ ಶಾಸಕ ಬಸವರಾಜ್ ಯತ್ನಾಳ್ ಅವರು, ಶಾಲಾ ಕಾಲೇಜುಗಳ ಸಮವಸ್ತ್ರದ ಬಗ್ಗೆ ಗಮನಹರಿಸಬೇಕು ಎಂದು ಹೇಳಿದರು,

ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಎಲ್ಲಾ ಸಮುದಾಯದ ಮಕ್ಕಳು ಕೂಡಿ ಊಟ ಮಾಡಬೇಕು, ಕೂಡಿ ಆಡಬೇಕು ಅಂದಾಗಲೇ ಸಮಾನತೆ ಸೃಷ್ಟಿಯಾಗುವುದು ಎಂದು ಹೇಳಿದರು.

ಸುಪ್ರೀಂ ಕೋರ್ಟ್ ಹೇಳಿರುವಂತೆ ನಮ್ಮ ದೇಶದಲ್ಲಿ ಸಮಾನ ನಾಗರಿಕತೆ ಸಯ್ಯುತೆ ತರುವ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿಯವರು 2024ರ ಒಳಗಾಗಿ ತರುವುದಾಗಿ ಈ ಸಂದರ್ಭದಲ್ಲಿ ಹೇಳಿದರು.

ಸಮಾಜ ನಾಗರೀಕ ಸಯ್ಯುತೆ ಎಲ್ಲಾ ಧರ್ಮದವರಿಗೆ ಅನ್ವಯವಾಗುವಂತದ್ದು‌, ಇದು ಕೆಲವೇ ದಿನಗಳಲ್ಲಿ ಭಾರತದಲ್ಲಿ ಜಾರಿಯಾಗಲಿದೆ ಎಂದು ಹೇಳಿದರು.

Related