ನಿವೃತ್ತ ಪೊಲೀಸ್ ಅಧಿಕಾರಿಗಳಿಗೆ ಬಿಳ್ಕೋಡುಗೆ

ನಿವೃತ್ತ ಪೊಲೀಸ್ ಅಧಿಕಾರಿಗಳಿಗೆ ಬಿಳ್ಕೋಡುಗೆ

ಕೆಜಿಎಪ್: ಸೇವೆಯಲ್ಲಿರುವಾಗ ಪ್ರತಿಯೊಬ್ಬ ಸರ್ಕಾರಿ ನೌಕರರು ಉತ್ತಮವಾದ ಸೇವೆಯನ್ನು ಸಲ್ಲಿಸುವ ಮೂಲಕ, ಅವರ ಸೇವೆಯು ಮುಂದಿನ ಜನಾಂಗಕ್ಕೆ ಆದರ್ಶವಾಗುವ ಮೂಲಕ ಜನಸಾಮಾನ್ಯರ ಮನಗೆಲ್ಲುವ ಕಾರ್ಯ ಮಾಡಬೇಕೆಂದು ಜಿಲ್ಲಾ ರಕ್ಷಣಾಧಿಕಾರಿ ಇಲಕ್ಕಿಯಾ ಕರುಣಾಕರನ್ ಸಲಹೆ ನೀಡಿದರು.
ಕೆಜಿಎಫ್ ಜಿಲ್ಲಾ ಪೊಲೀಸ್ ಕಚೇರಿಯ ಸಭಾಂಗಣದಲ್ಲಿ ವಯೋ ನಿವೃತ್ತಿ ಹೊಂದಿದ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ಏರ್ಪಡಿಸಿದ್ದ ಬಿಳ್ಕೋಡುಗೆ ಸಮಾರಂಭದಲ್ಲಿ ಮಾತನಾಡಿದರು.
ನಿವೃತ್ತ ಪೊಲೀಸ್ ಅಧಿಕಾರಿಗಳಾದ ನಿಸ್ತಂತು ಪೊಲೀಸ್ ಇನ್ಸ್ಪೆಕ್ಟರ್ ಎನ್.ಚಂದ್ರಶೇಖರ್, ಪಿಎಸ್‌ಐಗಳಾದ ವೆಂಕಟಮುನಿಶೆಟ್ಟಿ, ಎ.ಭದ್ಮಾವತಿ, ಎಎಸ್‌ಐಗಳಾದ ಲಕ್ಷ್ಮಣರಾವ್, ಕೆ.ರಾಣಿ, ಎಆರ್‌ಎಸ್‌ಐ ಎಸ್.ಪ್ರಭಾಕರನ್, ಮುಖ್ಯಪೇದೆ ಶ್ರೀನಿವಾಸ್, ವೈ.ದೇವಕುಮಾರ್, ಸಯ್ಯದ್‌ಖಾಸೀಂ ಅವರುಗಳು ಪೊಲೀಸ್ ಇಲಾಖೆಯ ವಿವಿಧ ವಿಭಾಗ, ಠಾಣೆಗಳಲ್ಲಿ ಅರ್ಥಪೂರ್ಣ ಸೇವೆಯನ್ನು ಸಲ್ಲಿಸುವ ಮೂಲಕ ಯಶಸ್ವಿಯಾಗಿರುತ್ತಾರೆ. ಇವರ ಸೇವೆ, ಅನುಭವವು ಎಲ್ಲರಿಗೂ ಮಾರ್ಗದರ್ಶನವಾಗಲೆಂದರು. ಉದ್ಯೋಗಿಗಳಿಗೆ ನಿವೃತ್ತಿಯು ಇದ್ದೇ ಇರುತ್ತದೆ, ಇರುವುದರೊಳಗೆ ಉತ್ತಮವಾದ ರೀತಿಯಲ್ಲಿ ಸೇವೆಯನ್ನು ಸಲ್ಲಿಸಬೇಕೆಂದರು. ನೈತಿಕ ಬೆಂಬಲದೊಂದಿಗೆ ಉತ್ತಮ ಬಾಂಧವ್ಯದ ಪರಿಸರದಲ್ಲಿ ಸರ್ಕಾರಿ ಸೇವೆಯನ್ನು ಪ್ರಾಮಾಣಿಕವಾಗಿ ಸಲ್ಲಿಸುವ ನಿಷ್ಠೆಯನ್ನು ಮೈಗೂಡಿಸಿಕೊಳ್ಳಬೇಕೆಂದು ಜಿಲ್ಲಾ ರಕ್ಷಣಾಧಿಕಾರಿ ಇಲಕ್ಕಿಯಾ ಕರುಣಾಕರನ್ ಸಲಹೆ ನೀಡಿದರು.
ನಿವೃತ್ತರಾದ ಎನ್.ಚಂದ್ರಶೇಖರ್, ಪಿಎಸ್‌ಐಗಳಾದ ವೆಂಕಟಮುನಿಶೆಟ್ಟಿ, ಎ.ಭದ್ಮಾವತಿ, ಎಎಸ್‌ಐಗಳಾದ ಲಕ್ಷ್ಮಣರಾವ್, ಕೆ.ರಾಣಿ, ಎಆರ್‌ಎಸ್‌ಐ ಎಸ್.ಪ್ರಭಾಕರನ್, ಮುಖ್ಯಪೇದೆ ಶ್ರೀನಿವಾಸ್, ವೈ.ದೇವಕುಮಾರ್, ಸಯ್ಯದ್‌ಖಾಸೀಂ ಅವರುಗಳಿಗೆ ಶಾಲು ಹೊದಿಸಿ, ಸನ್ಮಾನಿಸಿ, ನೆನಪಿನ ಕಾಣಿಕೆಯನ್ನು ನೀಡಿ ಗೌರವಿಸಲಾಯಿತು.

Related