ದೆಹಲಿ: ಬೆಂಗಳೂರಿನಲ್ಲಿ ಆರ್ಸಿಬಿ ವಿಜಯೋತ್ಸವ ಸಂದರ್ಭದಲ್ಲಿ 11 ಜನ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ರಾಜಕೀಯದಲ್ಲಿ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ವಿರೋಧ ಪಕ್ಷದ ನಾಯಕರು ಆಡಳಿತ ಪಕ್ಷದ ಮೇಲೆ ದಿನಕ್ಕೊಂದು ಗೂಬೆಕೂರಿಸುತ್ತಿದ್ದಾರೆ.
ಇನ್ನು ಆರ್ಸಿಬಿ ವಿಜಯೋತ್ಸವ ಕಾರ್ಯಕ್ರಮಕ್ಕೆ ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ದು ಯಾರು ಎಂಬ ಪ್ರಶ್ನೆ ಇದೀಗ ಎಲ್ಲರಲ್ಲಿ ಕಾಡುತ್ತಿದೆ.
ಈ ಕುರಿತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿದ್ದು, ರಾಜ್ಯಪಾಲರ ಆಹ್ವಾನದ ಬಗ್ಗೆ ಅವರನ್ನೇ ಕೇಳಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪೊಲೀಸರು ಯಾಕೆ ಬಲಿಪಶು ಅಂತ ಕೇಳಿದ್ದಕ್ಕೆ ಸಿಎಂ ಹೇಳಿದ್ದೇನೆ?
ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇದರ ಬಗ್ಗೆ ನನ್ನನ್ನ ಕೇಳಿದ್ರೆ ನನಗೇನು ಗೊತ್ತು? ಇದರ ಬಗ್ಗೆ ನೀವು ರಾಜ್ಯಪಾಲರನ್ನೇ ಕೇಳಬೇಕೆಂದು ಉತ್ತರಿಸಿದ್ದಾರೆ.
