ಬೆಂಗಳೂರು: ರಾಜ್ಯದಲ್ಲಿ ನಡೆದಿರುವ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವೇ ತಲೆ ತಗ್ಗಿಸುವಂತಾಗಿದೆ. ಈಗಾಗಲೇ ರಾಜ್ಯ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕರುಗಳು ಆಕ್ರೋಶ ಹೊರಹಾಕುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಸಿಎಂ ಡಿಸಿಎಂ ಅವರನ್ನು ಘಟನೆಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿ ನೀಡಲೆಂದು ಇಂದು (ಮಂಗಳವಾರ ಜೂನ್ 10) ರಂದು ರವರನ್ನ ದೆಹಲಿಗೆ ಕರೆದಿದ್ದಾರೆ.
ಆರ್‌ಸಿಬಿ ವಿಜಯೋತ್ಸವ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ 11 ಜನ ಆರ್‌ಸಿಬಿ ಅಭಿಮಾನಿಗಳು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.
ಇನ್ನು ಈ ಘಟನೆಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್ ಇಂದು ಮಹತ್ವದ ಸಭೆ ಕರೆದಿದ್ದು, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದೆಹಲಿಗೆ ತೆರಳಿದ್ದಾರೆ. ಇದನ್ನೂ ಓದಿ: ಹೊಣೆಗೇಡಿತನದ ನಿರ್ಧಾರದಿಂದಾಗಿ ಅಮಾಯಕ ಯುವಜೀವಗಳು ಬಲಿಯಾಗಿವೆ: ಬಿವೈವಿ
ಕಾಲ್ತುಳಿತ ದುರಂತ ಇಡೀ ದೇಶವೇ ಕರ್ನಾಟಕದತ್ತ ತಿರುಗಿ ನೋಡುವಂತೆ ಮಾಡಿತ್ತು. ಆರ್‌ಸಿಬಿ ಗೆದ್ದ ಸಂಭ್ರಮದಲ್ಲಿ ಬಂದಿದ್ದ ಅಭಿಮಾನಿಗಳ ಪೈಕಿ 11 ಜನ ಉಸಿರು ಗಟ್ಟಿ ಸತ್ತು ಹೋಗಿದ್ದರು. ಇದೇ ಘೋರ, ರಾಜ್ಯ ಸರ್ಕಾರಕ್ಕೆ ದೊಡ್ಡ ಇಕ್ಕಟ್ಟಿಗೆ ಸಿಲುಕಿಸಿದೆ. ಜೊತೆಗೆ ರಾಷ್ಟ್ರಮಟ್ಟದಲ್ಲೂ ಸರ್ಕಾರಕ್ಕೆ ಆರ್‌ಸಿಬಿ ಕಾಲ್ತುಳಿತ ಕಪ್ಪು ಚುಕ್ಕೆಯಾಗಿದೆ. ಹೀಗಾಗಿ ಕೈ ಹೈಕಮಾಂಡ್ ದುರಂತದ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.
