ಐಟಿಬಿಟಿ ಸಚಿವ ಪ್ರಧಾನಿಗೆ ವ್ಯಂಗ್ಯವಾಡಿದ್ಯೇಕೆ..?!

ಐಟಿಬಿಟಿ ಸಚಿವ ಪ್ರಧಾನಿಗೆ ವ್ಯಂಗ್ಯವಾಡಿದ್ಯೇಕೆ..?!

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು 5 ಗ್ಯಾರಂಟಿಗಳನ್ನು, ಕಾಂಗ್ರೆಸ್ ಪಕ್ಷದ ಹೆಸರಿನಲ್ಲಿ ಬಿಡುಗಡೆ ಮಾಡಿದೆ ಹೊರತಾಗಿ ಸಿದ್ದರಾಮಯ್ಯ ಅವರ ಗ್ಯಾರಂಟಿ ಎಂದು ನಾವು ಬಿಡುಗಡೆ ಮಾಡಿಲ್ಲ.

ಆದರೆ ದೇಶದ ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿ ಪಕ್ಷದ ಗ್ಯಾರಂಟಿಯನ್ನು ಮೋದಿ ಗ್ಯಾರಂಟಿ ಎಂದು ನಮ್ಮ ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳನ್ನು ಕಾಫಿ ಮಾಡಿ ಈಗ ಮೋದಿ ಗ್ಯಾರಂಟಿ ಎಂದು ದೇಶದ ಜನತೆಗೆ ಲೋಕಸಭಾ ಚುನಾವಣೆಯಲ್ಲಿ ಪ್ರಕಟಿಸುತ್ತಿದ್ದಾರೆ ಎಂದು ಐಟಿಬಿಟಿ ಸಚಿವ ಪ್ರಿಯಾಂಕರ್ ಗೆ ಅವರು ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ.

ನಗರದಲ್ಲಿಂದು ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಗ್ಯಾರಂಟಿ ಟಿವಿಯಲ್ಲಿದೆ, ನಮ್ಮ ಗ್ಯಾರಂಟಿ ‘ಕೈ’ಯಲ್ಲಿದೆ. ಮೋದಿ ಸುನಾಮಿ ದಕ್ಷಿಣದಲ್ಲಿ ಎಲ್ಲಿಯೂ ಇಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಕುಟುಕಿದರು.

ಮೋದಿ ಕರ್ನಾಟಕಕ್ಕೆ ಬಂದಾಗೆಲ್ಲಾ ಶ್ಯಾಡೋ ಸಿಎಂ ಅಂತ ಹೇಳ್ತಿರಲ್ಲ.. ನಮ್ಮಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅಂತ ಸ್ಪಷ್ಟವಾಗಿದೆ ಎಂದು ತಿರುಗೇಟು ನೀಡಿದರು.

ವಿಜಯೇಂದ್ರ ನಾಯಕತ್ವವನ್ನು ಅವರ ಪಕ್ಷದವರೇ ಒಪ್ಪಿಕೊಳ್ಳತ್ತಿಲ್ಲ. ಕಾಂಗ್ರೆಸ್​ಗಿಂತ ಹೆಚ್ಚಿನ ಕುಟುಂಬ ರಾಜಕಾರಣ ಬಿಜೆಪಿಯಲ್ಲಿದೆ. ಡಿಎನ್ಎ ಟೆಸ್ಟ್ ಮಾಡಿಸೋಣ, ಯಾರ್ಯಾರು ಯಾರ ಕುಟಂಬದವರು ಅಂತ ಗೊತ್ತಾಗುತ್ತೆ. ವಿತ್ ಡಿಎನ್ಎ ಕಿಟ್ ಇಟ್ಟು ಚರ್ಚೆ ಮಾಡೋಣ ಬನ್ನಿ ಎಂದು ಸವಾಲ್ ಹಾಕಿದರು.

 

Related