ನಟಿ ಶ್ರುತಿ ವಿರುದ್ಧ ಮಹಿಳಾ ಆಯೋಗ ನೋಟಿಸ್ ನೀಡಿದ್ಯಾಕೆ

ನಟಿ ಶ್ರುತಿ ವಿರುದ್ಧ ಮಹಿಳಾ ಆಯೋಗ ನೋಟಿಸ್ ನೀಡಿದ್ಯಾಕೆ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ 5 ಗ್ಯಾರಂಟಿಗಳನ್ನು ಘೋಷಿಸಿತ್ತು.ಈ ಐದು ಗ್ಯಾರಂಟಿಗಳಲ್ಲಿ ಮಹತ್ವದ ಗ್ಯಾರಂಟಿ ಯಾದ ಶಕ್ತಿ ಯೋಜನೆಯಿಂದ ರಾಜ್ಯದ ಹೆಣ್ಣು ಮಕ್ಕಳಿಗೆ ಬಹಳ ಉಪಯೋಗ ಆಗಿದೆ.

ಇನ್ನು ನಿಟಿ ಶ್ರುತಿ ಅವರು ಕಳೆದ ಕೆಲವು ದಿನಗಳ ಹಿಂದೆ ಉಡುಪಿಯಲ್ಲಿ ಬಿಜೆಪಿ ಪಕ್ಷದ ಪರವಾಗಿ ಮತ ಪ್ರಚಾರದ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕಿಸಿದ್ದಕ್ಕೆ ಮಹಿಳೆಯ ಆಯೋಗದಿಂದ ನೋಟಿಸ್ ನೀಡಲಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ.

ಹೌದು, ನಟಿ ಶ್ರುತಿ ಅವರು ಇತ್ತೀಚೆಗೆ ಉಡುಪಿಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಪರವಾಗಿ ಪ್ರಚಾರ ಕೈಗೊಂಡಿದ್ದ ಸಂದರ್ಭದಲ್ಲಿ ಹೆಣ್ಣು ಮಕ್ಕಳು ಎಲ್ಲೆಲ್ಲಿಗೋ ಹೋಗ್ತಾ ಇದ್ದಾರೆ ಎಂಬ ಹೇಳಿಕೆಗೆ ಶ್ರುತಿ ಅವರಿಗೆ ಮಹಿಳಾ ಆಯೋಗದ ಅಧ್ಯಕ್ಷ ನಾಗಲಕ್ಷ್ಮಿ ಚೌಧರಿ ಅವರು ನೋಟಿಸ್ ನೀಡಿದ್ದಾರೆ.

ಇನ್ನು ನಟಿ ಶ್ರುತಿ ನೀಡಿದ್ದ ಹೇಳಿಕೆಯನ್ನು ವಿರೋಧಿಸಿ ಸಾಮಾಜಿಕ ಕಾರ್ಯಕರ್ತ ಮನೋಹರ್ ಅವರು ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು. ದೂರಿನ ಅನ್ವಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಶ್ರುತಿಗೆ ನೋಟೀಸ್ ನೀಡಿದ್ದಾರೆ. ಹೇಳಿಕೆಯ ಬಗ್ಗೆ ಸ್ಪಷ್ಟನೆ ನೀಡುವಂತೆ ನೋಟಿಸ್​ನಲ್ಲಿ ಸೂಚಿಸಲಾಗಿದೆ. ಶ್ರುತಿ ಅವರ ಹೇಳಿಕೆಗೆ ಸೋಶಿಯಲ್​ ಮೀಡಿಯಾದಲ್ಲಿ ಅನೇಕ ಮಹಿಳೆಯರು ಕೂಡ ವಿರೋಧ ವ್ಯಕ್ತಪಡಿಸಿದ್ದರು.

 

 

Related