ಯತ್ನಾಳ್ ಕೇಂದ್ರ ನಾಯಕರನ್ನ ಭೇಟಿಯಾಗಿದ್ಯಾಕೆ?

ಯತ್ನಾಳ್ ಕೇಂದ್ರ ನಾಯಕರನ್ನ ಭೇಟಿಯಾಗಿದ್ಯಾಕೆ?

ವಿಜಯಪುರ: ರಾಜ್ಯ ಬಿಜೆಪಿಯಲ್ಲಿ ಅಲ್ಲೋಲಕಲವನೇ ಸೃಷ್ಟಿ ಮಾಡಿದ್ದ ಬಸವರಾಜ್ ಯತ್ನಾಳ್ ಅವರ ಸ್ವಪಕ್ಷದ ವಿರುದ್ಧ ಆರೋಪಗಳ ಮಾಡಿದ್ದರು. ಸ್ವಪಕ್ಷಗಳ ಮೇಲೆ ಆರೋಪಗಳ ಮಾಡುತ್ತಿದ್ದ ಬಸವರಾಜ್ ಯತ್ನಾಳ್ ಅವರು ಹೈಕಮಾಂಡ್ ಅಧಿಕಾರಿಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಹೌದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ದಾ ಅವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ಮಾಡಿದ್ದಾರೆ.

ಹೈಕಮಾಂಡ್ ಭೇಟಿ ಮಾಡಿ ಮಾತುಕತೆ ನಡೆಸಿದ ಬಗ್ಗೆ ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಯ ಭೇಟಿ ಫಲಪ್ರದವಾಗಿದೆ. ದೆಹಲಿಗೆ ಬರಲು ರಾಷ್ಟ್ರೀಯ ಅಧ್ಯಕ್ಷರಿಂದ ನನಗೆ ಕರೆ ಬಂದಿದ್ದ ಕಾರಣ ಹೋಗಿದ್ದೆ.

ರಾಷ್ಟ್ರೀಯ ಅಧ್ಯಕ್ಷರ ಭೇಟಿಗೂ ಮುನ್ನ ಅರುಣಸಿಂಗ್ ಹಾಗೂ ರಾಧಾ‌ಮೋಹನ್ ಅಗರವಾಲ್ ಅವರನ್ನು ಭೇಟಿ ಮಾಡಲು ತಿಳಿಸಿದ್ದರು. ಅವರಿಬ್ಬರ ಬಳಿ ಮಾತನಾಡಿದ ಮಾಹಿತಿಯನ್ನು ತಿಳಿದುಕೊಂಡ ಬಳಿಕ ಅಮಿತ್ ಶಾ ಹಾಗೂ ನಡ್ಡಾ ಅವರನ್ನ ಭೇಟಿಯಾಗಿದ್ದು, 25 ನಿಮಿಷಗಳ ಕಾಲ ಸುದೀರ್ಘ ಮಾತುಕತೆ ನಡೆಯಿತು. ಈ ವೇಳೆ ಎಲ್ಲಾ ವಿಚಾರಗಳನ್ನ ಕೇಂದ್ರದ ನಾಯಕರ ಮುಂದೆ ಹೇಳಿದ್ದೇನೆ ಎಂದು ವಿವರಿಸಿದರು.

ಎಲ್ಲವನ್ನೂ ಮುಂದಿನ ದಿನಗಳಲ್ಲಿ ಸರಿಪಡಿಸುವುದಾಗಿ ಕೇಂದ್ರದ ನಾಯಕರು ಭರವಸೆ ನೀಡಿದ್ದಾರೆ. ಏನಾದರೂ ಹೇಳುವುದಿದ್ದರೆ ನನಗೆ ನೇರವಾಗಿ ಹೇಳಿ ಎಂದು ನಡ್ಡಾ ಹೇಳಿದ್ದಾರೆ. ಎರಡು ದಿನ ಮುಂಚಿತವಾಗಿ ಮಾಹಿತಿ ನೀಡಿ ನಾನು ಭೇಟಿಯಾಗಲು ಸಮಯ ನೀಡುವೆ ಎಂದು ಹೇಳಿದ್ದಾರೆ.

ಈ ವೇಳೆ ನಿಮ್ಮ ಅಪಾರ್ಟ್ಮೆಂಟ್ ಸಿಗಲ್ಲ ಯಡಿಯೂರಪ್ಪ ವಿಜಯೇಂದ್ರಗೆ ಮಾತ್ರ ಸಿಗುತ್ತದೆ ಎಂದು ನಡ್ಡಾ ಅವರಿಗೆ ನಾನು ಮನವಿ ಮಾಡಿಕೊಂಡೆ. ಎರಡು ದಿನದಲ್ಲೇ ಭೇಟಿಗೆ ಅವಕಾಶ ನೀಡುತ್ತೇನೆ ಎಂದಿದ್ದಾರೆ. ಏನೇ ಇದ್ದರೂ ನಮಗೆ ತಿಳಿಸಬೇಕು ಯಾರ ಮುಲಾಜಿ ಇಲ್ಲದೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.

 

Related