ಪ್ರಜ್ವಲ್ ರೇವಣ್ಣರನ್ನು ಯಾಕೆ ಬಂಧಿಸಿಲ್ಲ? ಇದಕ್ಕೆ ಉತ್ತರ ನೀಡಿದ ಗೃಹ ಸಚಿವರು

ಪ್ರಜ್ವಲ್ ರೇವಣ್ಣರನ್ನು ಯಾಕೆ ಬಂಧಿಸಿಲ್ಲ? ಇದಕ್ಕೆ ಉತ್ತರ ನೀಡಿದ ಗೃಹ ಸಚಿವರು

ಬೆಂಗಳೂರು: ಕರ್ನಾಟಕ ರಾಜ್ಯ ಮಾತ್ರವಲ್ಲದೆ ಇಡಿ ದೇಶದಾದ್ಯಂತ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಹರಿದಾಡುತ್ತಿದ್ದು, ಈಗಾಗಲೇ ಈ ಪ್ರಕರಣ ಬೆಳಕಿಗೆ ಬಂದು 4-5 ದಿನ ಕಳೆದರೂ ಕೂಡ ಯಾಕೆ ಅವರನ್ನು ಬಂಧಿಸಿಲ್ಲ ಎಂಬ ಪ್ರಶ್ನೆಗಳು ಎಲ್ಲರಲ್ಲೂ ಮೂಡಿದೆ.

ಇನ್ನು ಇದಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ ಪರಮೇಶ್ವರ್ ಅವರು ಉತ್ತರ ನೀಡಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಪ್ರಜ್ವಲ್ ಮತ್ತು ಎಚ್ ಡಿ ರೇವಣ್ಣ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ. 24 ಗಂಟೆ ಒಳಗಾಗಿ ವಿಚಾರಣೆಗೆ ಹಾಜರಾಗಬೇಕೆಂದು ನೋಟಿಸ್ ನೀಡಲಾಗಿದ್ದು, ಅವರು 24 ಗಂಟೆ ಒಳಗಡೆ ತನಿಖೆಗೆ ಹಾಜರಾಗದಿದ್ದರೆ ಮುಂದಿನ ಕ್ರಮ ಏನೆಂದು ಎಸ್ಐಟಿ ಅಧಿಕಾರಿಗಳು ತೆಗೆದುಕೊಳ್ಳುತ್ತಾರೆ ಎಂಬ ಮಾಹಿತಿಯನ್ನು ನೀಡಿದ್ದಾರೆ.

ಇದನ್ನೂ ಓದಿ: ಪ್ರಜ್ವಲ್ ಪ್ರಕರಣ; ಕಾಂಗ್ರೆಸ್ ಮಹಾನಾಯಕರ ಚರ್ಚೆಯಾಗಬೇಕು: ಹೆಚ್. ಡಿ.ಕೆ

ಈಗಾಗಲೇ ಹೊಳೆನರಸೀಪುರದಲ್ಲಿರುವ ಎಚ್ ಡಿ ರೇವಣ್ಣ ಅವರ ಮನೆಗೆ ನೋಟಿಸ್ ಅಂಟಿಸಲಾಗಿದ್ದು ಆ ಮನೆಯಲ್ಲಿ ಯಾರು ಇಲ್ಲದ ಕಾರಣ ಮನೆ ಬಾಗಿಲಿಗೆ ನೋಟಿಸಟ್ಟಿಸಿದ್ದೇವೆ ಎಂದು ಹೇಳಿದ್ದಾರೆ. ಇನ್ನು ಯಾರನ್ನೇ ಆದರೂ ಏಕಾಏಕಿ ಬಂಧಿಸುವುದಿಲ್ಲ. ಅದಕ್ಕೆ ಪುರಾವೆಗಳು, ದೂರಿನಲ್ಲಿ ಏನು ಹೇಳಿರುತ್ತಾರೆ ಎಂಬುದೆಲ್ಲ ಮುಖ್ಯವಾಗುತ್ತವೆ. ಪ್ರಕರಣ ಯಾವ ಸೆಕ್ಷನ್ ಅಡಿಯಲ್ಲಿ ಬರುತ್ತದೆ? ಅದರಲ್ಲಿ ಬಂಧಿಸಲು ಅವಕಾಶ ಇದೆಯೇ? ಜಾಮೀನು ಪಡೆಯುವಂಥ ಪ್ರಕರಣವೇ? ಈ ಅಂಶಗಳನ್ನೆಲ್ಲ ಪರಿಗಣಿಸಬೇಕಾಗುತ್ತದೆ ಎಂದು ಹೇಳಿದರು.

ಅಪರಾಧ ದಂಡಸಂಹಿತೆಯ ಸೆಕ್ಷನ್ 41a ಅಡಿ‌ ನೊಟೀಸ್ ಕೊಟ್ಟಿದ್ದಾರೆ. ಅದರಂತೆ, ಆರೋಪಿಗಳು 24 ಗಂಟೆಯ ಒಳಗೆ ಬಂದು ವಿಚಾರಣೆಗೆ ಹಾಜರಾಗಬೇಕು. ವಿಚಾರಣೆಗೆ ಹಾಜರಾಗದೇ ಹೋದರೆ ಎಸ್​ಐಟಿ ತಂಡ ಮುಂದಿನ ಪ್ರಕ್ರಿಯೆ ಮಾಡಲಿದೆ. ನಾವು ಎಸ್​ಐಟಿ ರಚನೆ ಮಾಡಿ ತನಿಖೆಗೆ ವಹಿಸಿದ್ದೇವೆ ಎಂದು ಅವರು ಹೇಳಿದರು.

 

Related