ನಟಿ ರಮ್ಯಾ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡ್ತಾರಾ?

ನಟಿ ರಮ್ಯಾ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡ್ತಾರಾ?

ಮಂಡ್ಯ: ಸಿಎಂ ಮತ್ತು ಡಿಸಿಎಂ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದು ಮಂಡ್ಯ ಲೋಕಸಭಾದಲ್ಲಿ ಕಾಂಗ್ರೆಸ್  ಅಭ್ಯರ್ಥಿಯ ಪರವಾಗಿ ಕರ್ನಾಟಕ ರಾಜ್ಯಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಎಂಟ್ರಿ ನೀಡಲಿದ್ದಾರೆ ಎಂದು ಮಂಡ್ಯ ಶಾಸಕ ರವಿಕುಮಾರ್ ಗಣಿಗ ಹೇಳಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇದೇ ಏಪ್ರಿಲ್ 17 ಅಥವಾ 20ರಂದು ಮಂಡ್ಯದಲ್ಲಿ ಕಾಂಗ್ರೆಸ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದರು. ಇನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸ್ಟಾರ್ ಚಂದ್ರ ಪರವಾಗಿ ರಾಹುಲ್ ಗಾಂಧಿಯವರು ಪ್ರಚಾರ ಕೈಗೊಂಡಿದ್ದು, ಈ ಸಂದರ್ಭದಲ್ಲಿ ಮಾಜಿ ಸಂಸದೆ ಮತ್ತು ನಟಿಯಾಗಿರುವ ಮೋಹಕತಾರೆ ರಮ್ಯಾ ಅವರು ಕೂಡ ಪಾಲ್ಗೊಳಿದ್ದಾರೆ ಎಂಬ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

 

 

Related