ಈ ಬಾರಿ ಲೋಕಸಭಾ ಚುನಾವಣೆಗೆ ಸುಮಲತಾಗೆ ಟಿಕೆಟ್ ಸಿಗುತ್ತಾ?

ಈ ಬಾರಿ ಲೋಕಸಭಾ ಚುನಾವಣೆಗೆ ಸುಮಲತಾಗೆ ಟಿಕೆಟ್ ಸಿಗುತ್ತಾ?

ಮಂಡ್ಯ: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರವು ಮತ್ತೆ ಹೈ ವೋಲ್ಟೇಜ್ ಕ್ಷೇತ್ರವಾಗಿದೆ. ಇಡೀ ರಾಜ್ಯದ ಜನತೆ ಮಂಡ್ಯ ಕ್ಷೇತ್ರದ ಕಡೆಗೆ ತಿರುಗಿ ನೋಡುವ ಹಾಗೆ ಆಗಿದೆ.

ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲೂ ಕೂಡ ಮಂಡ್ಯ ಕ್ಷೇತ್ರವು ಇಡೀ ರಾಜ್ಯಕ್ಕೆ  ಹೈವೋಲ್ಟೇಜ್ ಕ್ಷೇತ್ರವಾಗಿ ಪರಿಣಮಿಸಿತ್ತು ಅದರಂತೆ ಈ ಬಾರಿಯೂ ಕೂಡ ಮಂಡ್ಯ ಕ್ಷೇತ್ರದಲ್ಲಿ ಪೈಪೋಟಿ ಪ್ರಾರಂಭವಾಗಿದೆ.

ಹೌದು, ಕಳೆದ ಬಾರಿ ಸಂಸದೆ ಸುಮಲತ ಅವರು ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದಿದ್ದರು. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದರಿಂದ ಮಂಡ್ಯ ಕ್ಷೇತ್ರದ ಟಿಕೆಟ್ ಈ ಬಾರಿ ಜೆಡಿಎಸ್ ಗೆ ನೀಡಲಾಗುತ್ತದೆ ಎಂದು ತಿಳಿದುಬಂದಿದೆ. ಆದರೆ ಬಿಜೆಪಿಯಲ್ಲಿ ಈ ಬಾರಿ ಸುಮಲತಾಗೆ ಟಿಕೆಟ್ ನೀಡುವುದಿಲ್ಲವೆಂದು ತಿಳಿದು ಬಂದಿದೆ. ಹಾಗಾದರೆ ಈ ಬಾರಿಯೂ ಕೂಡ ಸಂಸದೆ ಸುಮಲತಾ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆ ಕಣಕ್ಕೆ ಇಳಿಯಲಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಸುಮಲತಾ ಗೆ ಬಿಜೆಪಿಯಿಂದ ಟಿಕೆಟ್ ಸಿಗೋದು ಡೌಟ್  ಆಗಿರುವುದರಿಂದ ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸಂಸದೆ ಸುಮಲತೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

2-3 ದಿನಗಳಲ್ಲಿ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ವಿಜಯೇಂದ್ರ ಭೇಟಿ ವೇಳೆ ಮಂಡ್ಯ ಲೋಕಸಭೆ ಕ್ಷೇತ್ರ ಟಿಕೆಟ್ ನೀಡುವಂತೆ ಸುಮಲತಾ ಅವರು ಡಿಮ್ಯಾಂಡ್ ಮಾಡುವ ಸಾಧ್ಯತೆ ಇದೆ. ಈಗಾಗಲೇ ಬಿಜೆಪಿ ಜೆಡಿಎಸ್ ಮೈತ್ರಿಯಾಗಿದ್ದು ಬಹುತೇಕ ಜೆಡಿಎಸ್ ಗೆ ಮಂಡ್ಯ ಕ್ಷೇತ್ರ ಟಿಕೆಟ್ ನೀಡಲು ಬಿಜೆಪಿ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಸುಮಲತಾ ಜೊತೆ ಚರ್ಚೆ ನಡೆಸಿ ಬಿಜೆಪಿ ಜೊತೆಗೆ ಇರುವಂತೆ ಮಾತುಕತೆ ನಡೆಸಲಿದ್ದಾರೆ.

ಬಿಜೆಪಿ ಟಿಕೆಟ್ ಸಿಗದಿದ್ದರೆ ಪಕ್ಷೇತರವಾಗಿ ಸ್ವರ್ಧೆ ಮಾಡಲು ಸುಮಲತಾ ಅವರು ಚಿಂತನೆ ನಡೆಸಿದ್ದಾರೆ. ಈ ಮಧ್ಯೆ ಕಾಂಗ್ರೆಸ್ ಗೆ ಸೆಳೆಯಲು ಕಾಂಗ್ರೆಸ್ ಹೈಕಮಾಂಡ್ ಮಾಸ್ಟರ್ ಪ್ಲ್ಯಾನ್ ಮಾಡಿದೆ. ಮಂಡ್ಯ ಕ್ಷೇತ್ರಕ್ಕೆ ಕಾಂಗ್ರೆಸ್ ನಿಂದ ಸೂಕ್ತ ಅಭ್ಯರ್ಥಿ ಸಿಗದ ಹಿನ್ನೆಲೆ ಸುಮಲತಾರನ್ನೆ ಕಾಂಗ್ರೆಸ್ ನಿಂದ ಕಣಕ್ಕೆ ಇಳಿಸಲು ಪ್ಲ್ಯಾನ್ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಅವರು ಸುಮಲತಾರ ಮೇಲೆ ಒಲವು ತೋರಿಸಿದ್ದಾರೆ. ಪಕ್ಷೇತರಗಿಂತ ಕಾಂಗ್ರೆಸ್ ನಿಂದ ಸ್ವರ್ಧೆ ಮಾಡಿದ್ರೆ ಗೆಲುವು ಸುಲಭ ಎನ್ನುವ ಲೆಕ್ಕಾಚಾರ ನಡೆಯುತ್ತಿದೆ.

 

Related