ಪಕ್ಷೇತರ ಅಭ್ಯರ್ಥಿ ಈಶ್ವರಪ್ಪಗೆ ಮತದಾರರು ಕೈ ಹಿಡೀತಾರಾ?

ಪಕ್ಷೇತರ ಅಭ್ಯರ್ಥಿ ಈಶ್ವರಪ್ಪಗೆ ಮತದಾರರು ಕೈ ಹಿಡೀತಾರಾ?

ಶಿವಮೊಗ್ಗ: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರ ಮಗನಿಗೆ ಬಿಜೆಪಿ ಪಕ್ಷದಿಂದ ಟಿಕೆಟ್ ನೀಡದಿದ್ದ ಕಾರಣ ಈಗ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಲೋಕಸಭಾ ಕಣದಲ್ಲಿರುವ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಗೆಲ್ಲುವ ಉತ್ಸಾಹದಲ್ಲಿದ್ದಾರೆ.  ಹೇಗಾದರೂ ಮಾಡಿ ರಾಜ ಬಿಜೆಪಿ ಪಕ್ಷದಲ್ಲಿರುವ ಕುಟುಂಬ ರಾಜಕಾರಣಕ್ಕೆ ಕಡಿವಾಣ ಹಾಕಲು ಈಶ್ವರಪ್ಪ ಈ ಬಾರಿ ಚುನಾವಣಾ ಕಣಕ್ಕೆಇಳಿದ್ದಿದ್ದಾರೆ.

ಇನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣಾ ಕಣದಲ್ಲಿ ಬಿಜೆಪಿ ಅಭ್ಯರ್ಥಿ ಬಿ. ವೈ. ರಾಘವೇಂದ್ರಗೆ ಎದುರಾಳಿಯಾಗಿ ಕಾಂಗ್ರೆಸ್‌ನಿಂದ ಗೀತಾ ಶಿವರಾಜ್ ಕುಮಾರ್‌ ಮತ್ತು ಪಕ್ಷೇತರ ಅಭ್ಯರ್ಥಿಯಾಗಿ ಕೆ. ಎಸ್. ಈಶ್ವರಪ್ಪ ಕಣದಲ್ಲಿ ಉಳಿಯುವ ಮೂಲಕ ಚುನಾವಣಾ ಕಣ ರಂಗೇರಿಸಿದ್ದಾರೆ.

ಕೆ ಎಸ್ ಈಶ್ವರಪ್ಪ ಅವರು ಚುನಾವಣಾ ಆಯೋಗದಿಂದ ಕಬ್ಬಿನ ಜಲ್ಲೆ ಹೊಂದಿರುವ ರೈತನ ಗುರುತು ಪಡೆದಿದ್ದಾರೆ.

ಹೈ ವೋಲ್ಟೇಜ್ ಕ್ಷೇತ್ರವಾಗಿ ಪರಿಣಮಿಸಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಮತದಾರರು ಯಾರಿಗೆ ಕೈಹಿಡಿದ್ದಾರೆ ಎಂದು ಕಾದು ನೋಡಬೇಕಿದೆ.

Related