ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುತ್ತೇನೆ: ಡಿ.ಕೆ.ಸುರೇಶ್

ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುತ್ತೇನೆ: ಡಿ.ಕೆ.ಸುರೇಶ್

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಅವರು ಈ ಬಾರಿ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂಬ ಆತ್ಮವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ಮತ ಚಲಾಯಿಸಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು ಕಳೆದ ಮೂರು ಚುನಾವಣೆಗಳಿಗಿಂತ ಈ ಬಾರಿ ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುವ ಆತ್ಮವಿಶ್ವಾಸವಿದೆ‌. ಜನ ನನ್ನ ಪರವಾಗಿ ನಿಲ್ಲುವ ನಂಬಿಕೆಯಿದೆ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಹೇಳಿದರು.

ಶುಕ್ರವಾರ ಬೆಳಗಿನ ಜಾವದ ತನಕ ಕ್ಷೇತ್ರದ ಕಾರ್ಯಕರ್ತರು, ಮತದಾರರನ್ನು ಭೇಟಿಯಾಗಿ ಬಂದಿದ್ದೇನೆ. ಎಲ್ಲರೂ ಅತ್ಯಂತ ಹುಮ್ಮಸ್ಸಿನಿಂದ ಭಾಗವಹಿಸುತ್ತಿದ್ದಾರೆ ಎಂದರು. ಚುನಾವಣೆ ಪ್ರಜಾಪ್ರಭುತ್ವದ ಹಬ್ಬ. ಈ ಹಬ್ಬದಲ್ಲಿ ಹಿರಿಯರು, ಕಿರಿಯರು ಒಟ್ಟಾಗಿ ಭಾಗವಹಿಸಬೇಕು. ಮತದಾನ ಪ್ರಜಾಪ್ರಭುತ್ವದಲ್ಲಿ ಪ್ರಮುಖವಾದ ಪಾತ್ರವಹಿಸುತ್ತದೆ. ಈ ಹಕ್ಕನ್ನು ನಾವು ಚಲಾವಣೆ ಮಾಡಬೇಕಿರುವುದು ನಮ್ಮ ಕರ್ತವ್ಯ

ಸಂಸತ್ತು ಪ್ರಜಾಪ್ರಭುತ್ವದ ದೇಗುಲ. ಇದರ ಮೂಲಕ ದೇಶ, ರಾಜ್ಯವನ್ನು ಅಭಿವೃದ್ಧಿ ಮಾಡಲು, ಅವಶ್ಯಕತೆಗಳನ್ನು ಪೂರೈಸಲು, ಒಳ್ಳೆಯದನ್ನು ಮಾಡಲು, ಕಾನೂನು, ನಿಯಮಗಳನ್ನು ಮಾಡಲಾಗುತ್ತದೆ. ಆದ ಕಾರಣ ಲೋಕಸಭಾ ಚುನಾವಣೆ ಪ್ರಮುಖವಾದುದು‌. ಆದ್ದರಿಂದ ಎಲ್ಲ ನಾಗರಿಕರು ಮತದಾನದಲ್ಲಿ ಭಾಗವಹಿಸಬೇಕು. ನಾನು ನನ್ನ ಸ್ವಂತ ಊರಾದ ದೊಡ್ಡ ಆಲಹಳ್ಳಿಯಲ್ಲಿ ಕುಟುಂಬ ಸದಸ್ಯರ ಸಮೇತ ಮಧ್ಯಾಹ್ನದ ವೇಳೆಗೆ ತೆರಳಿ ಮತದಾನ ಮಾಡಲಾಗುವುದು” ಎಂದು ತಿಳಿಸಿದರು.

Related