ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಈ ಪಂಚ ಗ್ಯಾರಂಟಿ ಯೋಜನೆಯ ಕೂಡ ರಾಜ್ಯದಲ್ಲಿ ಜನರ ಮಂಣ್ಣನೆಯನ್ನು ಪಡೆದು ಉನ್ನತ ಮಟ್ಟಕ್ಕೆ ಸಾಗುತ್ತಿವೆ.
ಹೌದು, ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಈಗಾಗಲೇ ರಾಜ್ಯದಲ್ಲಿ ಪ್ರತಿ ಮನೆಮನೆಯ ತಲುಪುವೆ. ಪಂಚ ಗ್ಯಾರಂಟಿ ಯೋಜನೆಯಲ್ಲಿ ಮಹತ್ವದ ಗ್ಯಾರಂಟಿ ಯೋಜನೆಯಾದ ಶಕ್ತಿ ಯೋಜನೆಯಿಂದ ಇಡೀ ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನೀಡುವುದರ ಮೂಲಕ ಕಾಂಗ್ರೆಸ್ ಸರ್ಕಾರ ಇನ್ನಷ್ಟು ರಾಜ್ಯದ ಜನತೆಗೆ ಒಳಿತು ಮಾಡಿದೆ.
ಇನ್ನು ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆಯಲ್ಲಿ 2ನೇ ವರ್ಷದಲ್ಲಿ ಒಟ್ಟು 500 ಕೋಟಿ ಮಹಿಳೆಯರು ಉಚಿತವಾಗಿ ಬಸ್ ಪ್ರಯಾಣ ಮಾಡಿದ್ದಾರೆ. 500 ಕೋಟಿ ಜನರ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದು, 500 ಕೋಟಿಯ ಟಿಕೆಟ್ ಪಡೆದ ಮಹಿಳೆಗೆ ಲಕ್ಕಿ ಬಹುಮಾನ ನೀಡಲಾಗುವುದು ಎಂದು ಸಾರಿಗೆ ಸಚಿವರಾಗಿರುವಂತಹ ರಾಮಲಿಂಗಾರೆಡ್ಡಿ ಅವರು ತಿಳಿಸಿದ್ದಾರೆ.
ಈ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಗೆ ಮಹಿಳೆಯರಿಂದ ಭರ್ಜರಿ ರೆಸ್ಪಾನ್ಸ್ ದೊರೆತಿದ್ದು, ಇದೀಗ ಶಕ್ತಿ ಯೋಜನೆ ಹೊಸ ಮೈಲುಗಲ್ಲು ಬರೆಯಲು ಮುಂದಾಗಿದೆ. ಶಕ್ತಿ ಯೋಜನೆ ಜಾರಿಯಾದ ಎರಡೇ ವರ್ಷದಲ್ಲಿ 500 ಕೋಟಿ ಮಹಿಳೆಯರು ಸರ್ಕಾರಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಿ ದಾಖಲೆ ಬರೆಯಲಿದ್ದಾರೆ. 2023ರ ಜೂನ್ 11ರಂದು ಆರಂಭವಾಗಿದ್ದ ಈ ಯೋಜನೆಗೆ ಮಹಿಳೆಯರು ಬಹುಪರಾಕ್ ಎಂದಿದ್ದು, ಕೆಎಸ್ಆರ್ಟಿಸಿ ಸೇರಿದಂತೆ 4 ಸಾರಿಗೆ ನಿಗಮಗಳ ಬಸ್ಗಳಲ್ಲಿ ಸೋಮವಾರಕ್ಕೆ ಬರೋಬ್ಬರಿ 493 ಕೋಟಿ ಮಹಿಳಾ ಪ್ರಯಾಣಿಕರು ಒಂದು ರೂಪಾಯಿ ಹಣ ನೀಡದೆ ಉಚಿತವಾಗಿ ಪ್ರಯಾಣಿಸಿದ್ದಾರೆ. ಇದನ್ನೂ ಓದಿ: ಬಿಬಿಎಂಪಿ ನೌಕರರು ಪ್ರತಿಭಟನೆ
ಪ್ರತಿದಿನ 4 ಸಾರಿಗೆ ನಿಗಮದ ಬಸ್ಗಳಲ್ಲಿ 70 ರಿಂದ 75 ಲಕ್ಷ ಮಹಿಳೆಯರು ಫ್ರೀಯಾಗಿ ಸಂಚರಿಸುತ್ತಿದ್ದಾರೆ. ಭಾನುವಾರದವರೆಗಿನ ಅಂಕಿ ಅಂಶಗಳನ್ನು ನೋಡುವುದಾದರೆ ಸುಮಾರು 494 ಕೋಟಿಯಷ್ಟು ಮಹಿಳೆಯರು ಸಂಚರಿಸಿದ್ದು, 12,511 ಕೋಟಿ ರೂ. ಟಿಕೆಟ್ ಮೌಲ್ಯವಾಗಿದೆ. ಬರುವ ಸೋಮವಾರಕ್ಕೆ ಶಕ್ತಿ ಯೋಜನೆ 500 ಕೋಟಿ ಮಹಿಳೆಯರ ಉಚಿತ ಪ್ರಯಾಣದ ಗುರಿ ತಲುಪಿ, ರಾಜ್ಯ ಸಾರಿಗೆ ಇಲಾಖೆಯ ಇತಿಹಾಸದಲ್ಲೇ ಹೊಸ ರೆರ್ಕಾಡ್ ನಿರ್ಮಿಸಲಿದೆ.
ಈ 500 ಕೋಟಿಯ ಸಂಭ್ರಮಾಚರಣೆಯನ್ನು ಅದ್ದೂರಿಯಾಗಿ ಆಚರಿಸಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ. ಪ್ರಮುಖವಾಗಿ 500ನೇ ಟಿಕೆಟ್ ಪಡೆದ ಮಹಿಳೆಗೆ ಲಕ್ಕಿ ಪ್ರೈಸ್ ಸಿಗಲಿದೆ. ಈ ಶಕ್ತಿಯೋತ್ಸವವನ್ನು ಎಲ್ಲಾ ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಸಮಿತಿ ಹಾಗೂ ಸಾರಿಗೆ ಇಲಾಖೆಯು ಆಚರಿಸಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
