ಕುಮಾರಸ್ವಾಮಿಗೆ ನೋಟಿಸ್ ನೀಡಿದ ಮಹಿಳಾ ಆಯೋಗದ ಅಧ್ಯಕ್ಷೆ

ಕುಮಾರಸ್ವಾಮಿಗೆ ನೋಟಿಸ್ ನೀಡಿದ ಮಹಿಳಾ ಆಯೋಗದ ಅಧ್ಯಕ್ಷೆ

ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ಮಹಿಳೆಯರ ಬಗ್ಗೆ ಲಗುವಾಗಿ ಮಾತನಾಡುವುದು ಅವರ ಘನತೆ ಮತ್ತು ಗೌರವಕ್ಕೆ ಧಕ್ಕೆ ತರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ವಿರುದ್ಧ ಮತ್ತು ಸಂಜಯ್ ಪಾಟೀಲ್ ಅವರ ವಿರುದ್ಧ ಸ್ವಯಂ ಮಹಿಳಾ ಆಯೋಗ ದೂರನ್ನು ದಾಖಲಿಸಿದೆ.

ಕುಮಾರಸ್ವಾಮಿ ಮತ್ತು ಸಂಜಯ್ ಅವರ ವಿರುದ್ಧ ಈಗಾಗಲೇ ನೋಟಿಸ್ ನೀಡಿದ್ದು ವಿಚಾರಣೆಗೆ ಹಾಜರಾಗಬೇಕೆಂದು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿಯವರು ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಾರಿ ತಪ್ತಾ ಇದಾರೆ ಅಂದರೆ ಏನು ಅರ್ಥ? ಎಂದು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌತಿಯವರು ತರಾಟೆಗೆ ತೆಗೆದುಕೊಂಡಿದ್ದಾರೆ.

ಕುಮಾರಸ್ವಾಮಿ ಒಬ್ಬ ಹಿರಿಯ ರಾಜಕಾರಣಿ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿಯಾಗಿ ಮಹಿಳೆಯರು ಬಗ್ಗೆ ಬಹಳ ಕೀಳುಸ್ತರದಲ್ಲಿ ಮಾತಾಡಿದ್ದಾರೆ, ತಮ್ಮ ರಾಜಕೀಯ ಲಾಭಕ್ಕೆ ಅವರ ಮಹಿಳೆಯರ ಬಗ್ಗೆ ಕೆಟ್ಟದ್ದಾಗಿ ಮಾತಾಡುವುದು ಅವರ ವ್ಯಕ್ತಿತ್ವಕ್ಕೆ ಶೋಭೆ ನೀಡಲ್ಲ, ಅವರಿಗೆ ನೋಟೀಸ್ ಜಾರಿಗೊಳಿಸಲಾಗಿದೆ ಮತ್ತು ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಪ್ರಕರಣ ದಾಖಲಿಸಿಕೊಂಡು ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದರು

Related