ನಾಳೆಯಿಂದ ನಿರುದ್ಯೋಗ ಯುವಕ ಯುವತಿಯರಿಗೆ ಯುವನಿಧಿ ಯೋಜನೆ ಹಣ

ನಾಳೆಯಿಂದ ನಿರುದ್ಯೋಗ ಯುವಕ ಯುವತಿಯರಿಗೆ ಯುವನಿಧಿ ಯೋಜನೆ ಹಣ

ಬೆಂಗಳೂರು: ಕಾಂಗ್ರೆಸ್ ನ 5 ಗ್ಯಾರಂಟಿಗಳಲ್ಲೊಂದಾದ ಮಹತ್ವದ ಗ್ಯಾರಂಟಿ ಯುವ ನಿಧಿ ಯೋಜನೆಗೆ ನಾಳೆ ಶುಕ್ರವಾರ ಜನವರಿ 12ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಚಾಲನೆ ಮಾಡಲಿದ್ದು, ನಾಳೆಯಿಂದ ಡಿಪ್ಲೋಮಾ ಮತ್ತು ಪದವೀಧರ ನಿರುದ್ಯೋಗ ಇವತ್ತು ಯುವಕ ಯುವತಿಯರ ಖಾತೆಗೆ ನೇರವಾಗಿ ಹಣ ಬೀಳಲಿದೆ.

ಶಿವಮೊಗ್ಗ ನಗರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶಿವಮೊಗ್ಗ ಫಲಾನುಭವಿಗಳಿಗೆ ನಗದು ವರ್ಗಾವಣೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಗಣ್ಯರು ಯೋಜನೆಗೆ ಚಾಲನೆ ನೀಡಲಿದ್ದಾರೆ.

ಡಿಪ್ಲೋಮಾ ಮತ್ತು ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ಉದ್ಯೋಗಭತ್ಯೆ ನೀಡುವ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಚಾಲನೆ ನೀಡುವ ಸಮಾರಂಭಕ್ಕೆ ಶಿವಮೊಗ್ಗ ನಗರದ ಹೃದಯ ಭಾಗ ಫ್ರೀಡಂ ಪಾರ್ಕ್​ನ (ಹಳೆ ಜೈಲ್‌ ಆವರಣ) ವಿಶಾಲವಾದ ಜಾಗದಲ್ಲಿ ಬೃಹತ್‌ ವೇದಿಕೆ ಸಜ್ಜಾಗಿದ್ದು, 85 ಸಾವಿರಕ್ಕೂ ಹೆಚ್ಚು ಜನರಿಗೆ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗಾ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಿಂದ ಒಂದು ಲಕ್ಷಕ್ಕೂ ಅಧಿಕ ಫಲಾನುಭವಿಗಳು ಹಾಗೂ ಅಷ್ಟೇ ಸಂಖ್ಯೆಯ ಜನರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮೊದಲ ಕಂತಿನ ಹಣವನ್ನು ಬಿಡುಗಡೆ ಮಾಡಲಾಗುತ್ತದೆ.

.

Related