ಮನೆ ಮನೆಗೆ ಮೋದಿ ಪತ್ರ

ಮನೆ ಮನೆಗೆ ಮೋದಿ ಪತ್ರ

ಮುದ್ದೇಬಿಹಾಳ : ಪ್ರಧಾನಿ  ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಎರಡನೇ ಅವಧಿಯ ಒಂದು ವರ್ಷದ ಅವಧಿಯಲ್ಲಿ ಪೂರೈಸಿದ ಕಾರ್ಯಕ್ರಮಗಳು ಮತ್ತು ಯೋಜನೆಗಳು ಕುರಿತಾಗಿ ಪ್ರಧಾನಿ ಮೋದಿ ಅವರು ಬರೆದಿರುವ ಪತ್ರವನ್ನು ಮನೆ ಮನೆಗೆ ತಲುಪಿಸುವ ಕಾರ್ಯಕ್ರಮಕ್ಕೆ ಮಂಡಲ ಬಿಜೆಪಿ ಅಧ್ಯಕ್ಷ ಪರಶುರಾಮ ಪವಾರ ಚಾಲನೆ ನೀಡಿದರು.

ಪಟ್ಟಣದ ಹುಡ್ಕೋದಲ್ಲಿ ಈ ಅಭಿಯಾನಕ್ಕೆ ಚಾಲನೆ ನೀಡಿದರು. ಅಭಿಯಾನದ ಪ್ರಮುಖ ಮಂಜುನಾಥ ರತ್ನಾಕರ್ ಮಾತನಾಡಿ, ಪ್ರಧಾನಿಗಳು ಕೊರೋನಾ ವೈರಸ್ ಹರಡುವಿಕೆ ನಿಯಂತ್ರಣದ ಸಲುವಾಗಿ ಕೈಗೊಂಡಿರುವ ಕ್ರಮಗಳು ವಿಶ್ವದಲ್ಲಿ ಮೆಚ್ಚುಗೆಗೆ ಕಾರಣವಾಗಿದೆ. ಕೇಂದ್ರ ಸರಕಾರದ ಯೋಜನೆಗಳು ಜನರಿಗೆ ತಲುಪುವಲ್ಲಿ ಯಶಸ್ವಿಯಾಗಿವೆ ಎಂದರು.

Related