ಮೊದಲ ಟಿ20 ಪಂದ್ಯದಲ್ಲಿ ಭಾರತಕ್ಕೆ

  • In Sports
  • January 24, 2020
  • 1906 Views
ಮೊದಲ ಟಿ20 ಪಂದ್ಯದಲ್ಲಿ ಭಾರತಕ್ಕೆ

ಆಕ್ಲೆಂಡ್, ಜ. 24: ಅತಿಥೇಯ ನ್ಯೂಜಿಲೆಂಡ್ ತಂಡದ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ 6 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

ಆಕ್ಲೆಂಡ್ ನಲ್ಲಿ ಈಡನ್ ಪಾರ್ಕ್ ನಲ್ಲಿ ಇಂದು ನಡೆದ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ನೀಡಿದ್ದ 203 ರನ್ ಗಳ ಬೃಹತ್ ಗುರಿ ಬೆನ್ನು ಹತ್ತಿದ್ದ ಭಾರತ ತಂಡ ಇನ್ನೂ ಒಂದು ಓವರ್ ಬಾಕಿ ಇರುವಂತೆಯೇ 6 ವಿಕೆಟ್ ಕಳೆದುಕೊಂಡು 204ರನ್ ಗಳಿಸಿ ಜಯ ಗಳಿಸಿತು.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ನ್ಯೂಜಿಲೆಂಡ್ ತಂಡ ನಿಗದಿತ 20 ಓವರ್ಗಳಲ್ಲಿ 203 ರನ್ ಕಲೆಹಾಕಿ ಭಾರತಕ್ಕೆ ಬೃಹತ್ ಗುರಿ ನೀಡಿತ್ತು.

Related