ಶಕ್ತಿ ಯೋಜನೆ ಅನುಷ್ಠಾನಕ್ಕೆ 1 ವರ್ಷ

ಶಕ್ತಿ ಯೋಜನೆ ಅನುಷ್ಠಾನಕ್ಕೆ 1 ವರ್ಷ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ವಿಧಾನಸಭೆ ಚುನಾವಣೆ ಪ್ರಣಾಳಿಕೆಯಲ್ಲಿ 5 ಗ್ಯಾರಂಟಿಗಳನ್ನು ಘೋಷಿಸಿದ್ದು, ಈಗಾಗಲೇ ಐದು ಗ್ಯಾರಂಟಿಗಳನ್ನು ರಾಜ್ಯದ ಜನತೆಗೆ ನೀಡುತ್ತಿದ್ದಾರೆ.

ಇನ್ನು ಐದು ಗ್ಯಾರಂಟಿಗಳಲ್ಲಿ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದು ಮೊದಲ ಯೋಜನೆಯಾಗಿರುವ ಶಕ್ತಿ ಯೋಜನೆಗೆ ಈಗ ಒಂದು ವರ್ಷ ತುಂಬಿದೆ.  ಇದನ್ನೂ ಓದಿ: ಮತ್ತೊಂದು ದಸರಾ ಆನೆ ಸಾವು

ರಾಜ್ಯದ 227 ಕೋಟಿ ಮಹಿಳೆಯರು ಐಷಾರಾಮಿಯಲ್ಲದ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ಲಾಭವನ್ನು ಪಡೆದುಕೊಂಡಿದ್ದು, ಇದರಿಂದಾಗಿ ರಾಜ್ಯದ ಬೊಕ್ಕಸಕ್ಕೆ 5,526.64 ಕೋಟಿ ರೂಪಾಯಿ ವೆಚ್ಚವಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಇಂದು (ಮಂಗಳವಾರ) ತಿಳಿಸಿದ್ದಾರೆ.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಕಳೆದ ವರ್ಷ ಜೂನ್ 11 ರಂದು ಪಕ್ಷವು ವಿಧಾನಸಭೆ ಚುನಾವಣೆಗೆ ಮೊದಲು ಭರವಸೆ ನೀಡಿದ್ದ ಐದು ಖಾತರಿಗಳಲ್ಲಿ ಒಂದಾದ ‘ಶಕ್ತಿ’ ಯೋಜನೆಯನ್ನು ಪ್ರಾರಂಭಿಸಿತು.

ರಾಜ್ಯ ಸರ್ಕಾರವು ‘ಶಕ್ತಿ’ ಯೋಜನೆ ಅನುಷ್ಠಾನ ಮಾಡಿ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ 226.95 ಕೋಟಿ ಮಹಿಳೆಯರು ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ ಎಂದು ರೆಡ್ಡಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related