ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಅನಾವರಣ

ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಅನಾವರಣ

ಬೆಂಗಳೂರು: ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಅವರು ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಇವರ ವತಿಯಿಂದ ವಿಧಾನಸೌಧದ ಬೃಹತ್ ಮೆಟ್ಟಿಲುಗಳು ಬಳಿ  ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಭವ್ಯ ಕಂಚಿನ “ಪ್ರಗತಿಯ ಪ್ರತಿಮೆ ಅನಾವರಣದ ಪ್ರಯುಕ್ತ ನಾಡಿನಾದ್ಯಂತ ಪವಿತ್ರ ಮೃತ್ತಿಕೆ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್, ಡಾ: ಕೆ.ಸುಧಾಕರ್, ಆರಗ ಜ್ಞಾನೇಂದ್ರ, ಆರ್.ಅಶೋಕ್, ಸುನೀಲ್ ಕುಮಾರ್,  ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದಗೌಡ ಮತ್ತಿತರರು ಉಪಸ್ಥಿತರಿದ್ದರು.

 

 

Related