14 ಕ್ಷೇತ್ರಗಳಲ್ಲಿ ಇಂದು ಸಂಜೆಯಿಂದ ಬಹಿರಂಗ ಪ್ರಚಾರಕ್ಕೆ ತೆರೆ

14 ಕ್ಷೇತ್ರಗಳಲ್ಲಿ ಇಂದು ಸಂಜೆಯಿಂದ ಬಹಿರಂಗ ಪ್ರಚಾರಕ್ಕೆ ತೆರೆ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಮೊದಲನೇ ಹಂತದ ಮತದಾನ ಇದೆ ಏಪ್ರಿಲ್ 26ರಂದು ನಡೆಯಲಿದ್ದು, ಎಲ್ಲ ಪಕ್ಷದ ಅಭ್ಯರ್ಥಿಗಳು ಬರದಿಂದ ಪ್ರಚಾರದಲ್ಲಿ ತೊಡಗಿದ್ದಾರೆ. 14 ಲೋಕಸಭಾ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ ಬೀಳಲಿದ್ದು ಎಲ್ಲಾ ಪಕ್ಷದ ಅಭ್ಯರ್ಥಿಗಳು ಬರದಿಂದ ಪ್ರಚಾರದಲ್ಲಿ ತೊಡಗಿದ್ದಾರೆ.

ನಾಳೆಯಿಂದ ಕೇವಲ ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಪ್ರಚಾರ ಮಾಡಬಹುದೇ ಹೊರತಾಗಿ ಬಹಿರಂಗ ಸಭೆ, ಸಮಾರಂಭ, ರ್ಯಾಲಿ ಮಾಡಲು ಅವಕಾಶ ಇರುವುದಿಲ್ಲ. ಇನ್ನು ಬುಧವಾರ ಸಂಜೆಯಿಂದ 14 ಲೋಕಸಭಾ ಕ್ಷೇತ್ರಗಳಲ್ಲಿ 144 ಸೆಕ್ಷನ್  ಜಾರಿಯಾಗಲಿದೆಜಾರಿಯಾಗಲಿದೆ

ಇನ್ನು ಕರ್ನಾಟಕ ರಾಜ್ಯದಲ್ಲಿ ಏಪ್ರಿಲ್‌ 26ರಂದು ಮೊದಲ ಹಂತದಲ್ಲಿ ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ.

ಬಿಜೆಪಿ, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳ ಘಟಾನುಘಟಿ ನಾಯಕರು ಶುಕ್ರವಾರದಿಂದ ಎರಡನೇ ಹಂತದ ಕ್ಷೇತ್ರಗಳಲ್ಲಿ ಪ್ರಚಾರಕ್ಕೆ ಸಜ್ಜಾಗಿದ್ದಾರೆ.

 

Related