ಒಂದೇ ದಿನಕ್ಕೆ 18,313 ಕೊರೊನಾ ಸೋಂಕು ದೃಢ..!

ಒಂದೇ ದಿನಕ್ಕೆ 18,313 ಕೊರೊನಾ ಸೋಂಕು ದೃಢ..!

ನವದೆಹಲಿ, ಜುಲೈ 27 : ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 18,313 ಹೊಸ ಕೊರೊನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ 57 ಸಾವುಗಳು ಸಂಭವಿಸಿವೆ.

ಕೇಂದ್ರ ಆರೋಗ್ಯ ಸಚಿವಾಲಯವು ಹಂಚಿಕೊಂಡ ಮಾಹಿತಿಯ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಒಟ್ಟು 20,742 ಮಂದಿ ಚೇತರಿಸಿಕೊಂಡಿದ್ದಾರೆ. ಒಟ್ಟು ಚೇತರಿಕೆಯ ದರವನ್ನು ಸುಮಾರು 98.47 ಪ್ರತಿಶತಕ್ಕೆ ಏರಿಕೆಯಾಗಿದೆ. ಒಟ್ಟು ಚೇತರಿಕೆಯ ಸಂಖ್ಯೆ 4,32,67,571ಕ್ಕೆ ತಲುಪಿದೆ.

ದೇಶದಲ್ಲಿ ಒಟ್ಟು ಕೊರೊನಾದ ಸಕ್ರಿಯ ಪ್ರಕರಣಗಳು 1,45,026ಕ್ಕೆ ಇಳಿದಿದೆ ಎಂದು ಆರೋಗ್ಯ ಸಚಿವಾಲಯದ ಅಂಕಿಅಂಶಗಳು ಇಂದು ತಿಳಿಸಿವೆ. ಮಂಗಳವಾರ 1,47,512 ಸಕ್ರಿಯ ಪ್ರಕರಣಗಳು ದಾಖಲಾಗಿವೆ.

Related