ಆರೋಗ್ಯ ಹಸ್ತಕ್ಕೆ 2 ಲಕ್ಷ ದೇಣಿಗೆ

ಆರೋಗ್ಯ ಹಸ್ತಕ್ಕೆ 2 ಲಕ್ಷ ದೇಣಿಗೆ

ಆರೋಗ್ಯ ಹಸ್ತ ಕಾರ್ಯಕ್ರಮಕ್ಕೆ ರಾಮನಗರ, ಕನಕಪುರ, ಚನ್ನಪಟ್ಟಣ, ಮಾಗಡಿ ವಿಧಾನಸಭಾ ಕ್ಷೇತ್ರಗಳಿಂದ ತಲಾ 2 ಲಕ್ಷ ರೂಪಾಯಿ ಚೆಕ್ ಗಳನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಹಾಗೂ ಆರೋಗ್ಯ ಹಸ್ತ ನಿರ್ವಹಣಾ ಸಮಿತಿಯ ಮುಖ್ಯಸ್ಥ ಧೃವ ನಾರಾಯಣ್ ಅವರಿಗೆ ರಾಮನಗರ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಇಕ್ಬಾಲ್ ಹುಸೇನ್ ಅವರು ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಬೆಂಗಳೂರು ಲೋಕಸಭಾ ಕ್ಷೇತ್ರದ ಸದಸ್ಯ ಡಿ.ಕೆ ಸುರೇಶ್, ಮಾಜಿ ಶಾಸಕ ಬಾಲಕೃಷ್ಣ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನರಸಿಂಹಮೂರ್ತಿ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ತಿಮ್ಮಯ್ಯ ಇದ್ದರು.

Related