ಡ್ರಗ್ಸ್ ದಂಧೆ 2 ವಿದ್ಯಾರ್ಥಿಗಳ ಬಂಧನ

ಡ್ರಗ್ಸ್ ದಂಧೆ 2 ವಿದ್ಯಾರ್ಥಿಗಳ ಬಂಧನ

ಉಡುಪಿ: ರಾಜ್ಯದಲ್ಲಿ ಇತ್ತೀಚಿನ ದಿನಗಳಗಳಲ್ಲಿ ಡ್ರಗ್ಸ್ ದಂಧೆ ಹೆಚ್ಚಾಗಿರುವುದರಿಂದ ಡ್ರಗ್ಸ್ ದಂಧೆಗೆ ಬ್ರೇಕ್ ಹಾಕಲು ಗೃಹ ಸಚಿವ ಪರಮೇಶ್ವರ ಅವರು ಸೂಚನೆ ನೀಡಿದ್ದರು.

ಇದರ ಬೆನ್ನಲ್ಲೇ ಉಡುಪಿ ಜಿಲ್ಲೆಯಲ್ಲಿ ಕಾನೂನು ವಿದ್ಯಾರ್ಥಿಗಳು ಡ್ರಗ್ಸ್ ದಂಧೆಯಲ್ಲಿ ತೊಡಗಿದವರನ್ನು ಬಂಧಿಸಲಾಗಿದೆ.

ಹೌದು, ಇತ್ತೀಚೆಗೆ ಡ್ರಗ್ಸ್ ಪ್ರಕರಣಗಳು ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದನ್ನ ತಡೆಯಲು ಎಷ್ಟೇ ಕಟ್ಟುನಿಟ್ಟಿನ ಕ್ರಮ ಕೈಗೊಂಡರು ಇದಕ್ಕೆ ಬ್ರೇಕ್​ ಬಿಳುತ್ತಿಲ್ಲ. ಇದೀಗ ಡ್ರಗ್ಸ್ ಮಾರಾಟ ದಂಧೆಯಲ್ಲಿ ತೊಡಗಿದ್ದ ಉಡುಪಿಯ ವೈಕುಂಠ ಬಾಳಿಗಾ ಕಾನೂನು ಕಾಲೇಜಿನ ಮೂವರು ವಿದ್ಯಾರ್ಥಿಗಳಲ್ಲಿ ಇಬ್ಬರನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ನಿಭೀಷ್(23), ಅಮಲ್ (22)ಬಂಧಿತ ವಿದ್ಯಾರ್ಥಿಗಳು. ಮತ್ತೋರ್ವ ವಿದ್ಯಾರ್ಥಿ ಬಂಧನದ ವೇಳೆ ತಲೆಮರೆಸಿಕೊಂಡಿದ್ದು, ಹುಡುಕಾಟ ಆರಂಭಿಸಿದ್ದಾರೆ.

 

Related