‘ಗಾರ್ಗಿ’ ಚಿತ್ರದ ಮೂಲಕ ಕನ್ನಡಕ್ಕೆ ಎಂಟ್ರಿಕೊಟ್ಟ ಸಾಯಿ ಪಲ್ಲವಿ

‘ಗಾರ್ಗಿ’ ಚಿತ್ರದ ಮೂಲಕ ಕನ್ನಡಕ್ಕೆ ಎಂಟ್ರಿಕೊಟ್ಟ ಸಾಯಿ ಪಲ್ಲವಿ

ನಟಿ ಸಾಯಿ ಪಲ್ಲವಿಗೆ ತೆಲುಗು, ತಮಿಳು ಮಾತ್ರವಲ್ಲದೇ ದೇಶಾದ್ಯಂತ ಅಭಿಮಾನಿಗಳಿದ್ದಾರೆ. ಈ ಹಿಂದೆ ರಾಷ್ಟ್ರ ಪ್ರಶಸ್ತಿ ವಿಜೇತ ಮಂಸೋರೆ ನಿರ್ದೇಶನದ ಸಿನಿಮಾ ಮೂಲಕ ಸಾಯಿ ಪಲ್ಲವಿ ಕನ್ನಡಕ್ಕೆ ಕಾಲಿಡಲಿದ್ದಾರೆ ಎನ್ನಲಾಗಿತ್ತು. ಆದ್ರೀಗ ತಮ್ಮ ಹುಟ್ಟುಹಬ್ಬದಂದು ನಟಿ ಸಾಯಿ ಪಲ್ಲವಿ ಕನ್ನಡದ ಅಭಿಮಾನಿಗಳಿಗೆ ಗುಡ್​ ನ್ಯೂಸ್​ ನೀಡಿದ್ದಾರೆ.

ಇಂದು ಸಾಯಿ ಪಲ್ಲವಿ ಬರ್ತ್​ಡೇ ಪ್ರಯುಕ್ತ ಅವರ ನಟನೆಯ ಕನ್ನಡ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿದ್ದು, ಈ ಸಿನಿಮಾಕ್ಕೆ ‘ಗಾರ್ಗಿ’ ಎಂದು ಹೆಸರಿಡಲಾಗಿದೆ. ಗಾರ್ಗಿ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಸ್ವತಃ ಸಾಯಿ ಪಲ್ಲವಿ ಅವರೇ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಹೊಸ ಚಿತ್ರಕ್ಕೆ ಹಾರೈಸಿ ಎಂದು ಕೇಳಿಕೊಂಡಿದ್ದಾರೆ.

ಈ ಸಿನಿಮಾ ತೆಲುಗು, ತಮಿಳು, ಮಲಯಾಳಂ ಮತ್ತು ಕನ್ನಡ ಸೇರಿದಂತೆ ನಾಲ್ಕು ಭಾಷೆಗಳಲ್ಲಿ ರಿಲೀಸ್​ ಆಗಲಿದೆ. ಇದೊಂದು ಮಹಿಳಾ ಪ್ರಧಾನ ಸಿನಿಮಾವಾಗಿದ್ದು, ನ್ಯಾಯಕ್ಕಾಗಿ ಹೋರಾಟ ಮಾಡುವ ಮಹಿಳೆಯಾಗಿ ಸಾಯಿ ಪಲ್ಲವಿ ಕಾಣಿಸಿಕೊಳ್ಳಲಿದ್ದಾರೆ.

Related