ಲಿಡ್ಕರ್ ಮೂಲಕ ಸ್ವಯಂ ಉದ್ಯೋಗ ಒದಗಿಸಲು ಆದ್ಯತೆ : ಮುಖ್ಯಮಂತ್ರಿಗಳು

ಬೆಂಗಳೂರು, ಮೇ 13: ರಾಜ್ಯದ ಪ್ರತಿ ತಾಲ್ಲೂಕಿನಲ್ಲಿ 100 ಹೆಚ್ಚುವರಿ ಸ್ವಯಂ ಉದ್ಯೋಗಕ್ಕೆ ಪ್ರೋತ್ಸಾಹ ನೀಡಲು ತೀರ್ಮಾನಿಸಲಾಗಿದ್ದು, ಲಿಡ್ಕರ್  ಯುವಕರಿಗೆ ಉದ್ಯೋಗವನ್ನು ಕಲ್ಪಿಸಲು ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಲಿಡ್ಕರ್ ನಿಗಮಕ್ಕೆ ಈ ಬಾರಿ 25 ಕೋಟಿ ರೂ.ಗಳ ಅನುದಾನವನ್ನು ಮೀಸಲಿಡಲಾಗಿದೆ. ನಿಗಮವು ಹೆಚ್ಚಿನ ಉದ್ಯೋಗಾವಕಾಶಗಳನ್ನು ಒದಗಿಸಿದ್ದಲ್ಲಿ ಪೂರಕ ಬಜೆಟ್ ನಲ್ಲಿ ಹೆಚ್ಚಿನ ಅನುದಾನವನ್ನು ನೀಡಲಾಗುವುದು.

33000 ಉದ್ಯಮಗಳಿಗೆ ಸಹಾಯ:

ಚರ್ಮೋದ್ಯಮದಲ್ಲಿ ಉದ್ಯೋಗ, ಉತ್ಪಾದನೆಗಳನ್ನು ಹೆಚ್ಚಿಸಲು ಎಲ್ಲ ಕ್ರಮಗಳನ್ನು ಸರ್ಕಾರ ತೆಗೆದುಕೊಳ್ಳಲಿದೆ. ಲಿಡ್ಕರ್ ನಿಗಮದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಲಿಡ್ಕರ್ ಸಂಸ್ಥೆಯನ್ನು ಸಮಾಜ ಕಲ್ಯಾಣ ಇಲಾಖೆಗೆ ಸೇರಿಸಿ ಕಳೆದ ಐದು ವರ್ಷಗಳಿಂದ  237 ಕೋಟಿ ರೂ. ಅನುದಾನ ಒದಗಿಸುವ ಮೂಲಕ 33000 ಉದ್ಯಮಗಳಿಗೆ ಸಹಾಯವನ್ನು ಮಾಡಲಾಗಿದೆ ಎಂದರು.

Related