ಕಮಲ್ ಹಾಸನ್ ಬರೆದ ಹಾಡಿನ ವಿರುದ್ಧ ಸೆಲ್ವಂ ದೂರು ದಾಖಲು..!!

ಕಮಲ್ ಹಾಸನ್ ನಟನೆಯ ವಿಕ್ರಮ್(Vikram) ಸಿನಿಮಾದ ಹಾಡು ಇತ್ತೀಚಿಗಷ್ಟೆ ಬಿಡುಗಡೆಯಾಗಿತ್ತು. ‘ಪಾತಾಳ ಪಾತಾಳ…’ ಎನ್ನುವ ಸಾಹಿತ್ಯವಿರುವ ಹಾಡು ಇದಾಗಿದ್ದು ಈ ಹಾಡಿನಲ್ಲಿ ಕೇಂದ್ರ ಸರ್ಕಾರವನ್ನು ಅಣಕ ಮಾಡಲಾಗಿದೆ ಎನ್ನುವ ಕಾರಣಕ್ಕೆ ಕಮಲ್ ಹಾಸನ್ ವಿರುದ್ಧ ದೂರು ದಾಖಲಾಗಿದೆ.

ವಿವಾದದಲ್ಲಿ ಸಿಲುಕಿರುವ ಪಾತಾಳ್ ಪಾತಾಳ್ ಹಾಡನ್ನು ಕಮಲ್ ಹಾಸನ್ ಅವರೇ ಬರೆದು ಹಾಡಿರುವ ಹಾಡಾಗಿದೆ. ಈ ಹಾಡಿನಲ್ಲಿ ಕೇಂದ್ರ ಸರ್ಕಾರವನ್ನು ಅಣಕಿಸುವ ಸಾಲುಗಳಿವೆ ಎಂದು ಚೆನ್ನೈನ ಕೊರುಕ್ಕುಪೆಟ್ಟೈ ನಿವಾಸಿಯಾದ ಸೆಲ್ವಂ ಅವರು ಕಮಲ್ ದೂರು ದಾಖಲಿಸಿದ್ದಾರೆ.

ಹಾಡಿನ ಅರ್ಥ ‘ಖಜಾನೆಯಲ್ಲಿ ಹಣವಿಲ್ಲ, ಜ್ವರ ಮತ್ತು ರೋಗಗಳು ಹೆಚ್ಚುತ್ತಿರುವ ಸಮಯದಲ್ಲಿ ಕೇಂದ್ರದ (ಕೇಂದ್ರ ಸರ್ಕಾರ) ತಪ್ಪಿನಿಂದಾಗಿ ಏನು ಉಳಿದಿಲ್ಲ. ಕೀ ಈಗ ಕಳ್ಳನ ಬಳಿ ಇದೆ’ ಎನ್ನುವ ಅರ್ಥದ ಸಾಲು ಈ ಹಾಡಿನಲ್ಲಿ ಇದೆ ಎನ್ನುವ ಕಾರಣಕ್ಕೆ ಕಮಲ್ ಹಾಸನ್ ವಿರುದ್ಧ ದೂರು ದಾಖಲಿಸಲಾಗಿದೆ.

Related