223 ಕೋಟಿ ರೂ. ವೆಚ್ಚದಲ್ಲಿ ನಾಡಪ್ರಭು ಕೆಂಪೇಗೌಡರ ತಾಣಗಳ ಅಭಿವೃದ್ಧಿ

223 ಕೋಟಿ ರೂ. ವೆಚ್ಚದಲ್ಲಿ ನಾಡಪ್ರಭು ಕೆಂಪೇಗೌಡರ ತಾಣಗಳ ಅಭಿವೃದ್ಧಿ

ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಸುಮಾರು 46 ಪಾರಂಪರಿಕ ತಾಣಗಳನ್ನು ಮೂರು ಸರ್ಕ್ಯುಟ್ ಗುರುತಿಸಲಾಗಿದ್ದು, ಪ್ರವಾಸೋದ್ಯಮ ಅಭಿವೃದ್ಧಿಯನ್ನೂ ದೃಷ್ಟಿಯಲ್ಲಿರಿಸಿಕೊಂಡು ತಾಣಗಳ ಅಭಿವೃದ್ಧಿ ಕಾರ್ಯಕ್ರಮ ಜಾರಿಗೊಳಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಾತನಾಡಿದರು.                                                                                                                      ಬೆಂ. ನಗರ, ಬೆಂ. ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಲ್ಲಿನ ಐತಿಹಾಸಿಕ ಸ್ಥಳಗಳನ್ನು ಅಭಿವೃದ್ಧಿ ಪಡಿಸಲು. 132 ಕೋಟಿ ರೂ. ವೆಚ್ಚದಲ್ಲಿ ಮಾಗಡಿ ಸರ್ಕ್ಯುಟ್, 47 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು ಸರ್ಕ್ಯುಟ್ 44 ಕೋಟಿ ರೂ. ವೆಚ್ಚದಲ್ಲಿ ನಂದಿ ಸರ್ಕ್ಯುಟ್ ಅಭಿವೃದ್ಧಿ ಪಡಿಸಲು ಯೋಜನೆ ರೂಪಿಸಲಾಗಿದೆ.
ಕೆಂಪೇಗೌಡರ ಪ್ರತಿಮೆಯನ್ನು ಬೆಂ. ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ 64 ಕೋಟಿ ರೂ. ವೆಚ್ಚದಲ್ಲಿ 108 ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಈ ಪ್ರತಿಮೆಯ ಸುತ್ತ ಥೀಮ್ ಪಾರ್ಕ್ ನಿರ್ಮಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.                                                                                                                                ರಾಮನಗರ ಜಿಲ್ಲೆಯ ಕೆಂಪಾಪುರ ಗ್ರಾಮದಲ್ಲಿ ನಾಡಪ್ರಭು ಕೆಂಪೇಗೌಡರ ವೀರ ಸಮಾಧಿ ಅಭಿವೃದ್ಧಿ ಕಾರ್ಯಕ್ಕೆ ಭೂಸ್ವಾಧೀನ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. 32 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಈ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಗೆ ಜಮೀನು ಕಳೆದುಕೊಳ್ಳುವ 46 ಕುಟುಂಬಗಳಿಗೆ ಪುನರ್ವಸತಿ, ರಸ್ತೆ ಅಭಿವೃದ್ಧಿ ಮತ್ತಿತರ ಮೂಲಸೌಕರ್ಯ ಒದಗಿಸುವ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಿದರು.

ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ, ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ. ಸುರೇಶ್, ಮಾಗಡಿ ಶಾಸಕ ಮಂಜುನಾಥ್, ಪ್ರಾಧಿಕಾರದ ಸದಸ್ಯರು, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Related