ಕರ್ನಾಟಕ ರಾಜ್ಯದಲ್ಲಿಂದು 2ನೇ ಹಂತದ ಮತದಾನ

ಕರ್ನಾಟಕ ರಾಜ್ಯದಲ್ಲಿಂದು 2ನೇ ಹಂತದ ಮತದಾನ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಕರ್ನಾಟಕ ರಾಜ್ಯದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದ್ದು ಉತ್ತರ ಕರ್ನಾಟಕದ ಮಂದಿ ಬಿಸಿಲನ್ನು ಲೆಕ್ಕಿಸದೆ ಬೆಳ್ಳಂಬೆಳಗ್ಗೆ ತಮ್ಮ ಮತದಾನದ ಹಕ್ಕನ್ನು ಚಲಾಯಿಸಲು ಮುಂದಾಗಿದ್ದಾರೆ.

ಹೌದು, ಲೋಕಸಭಾ ಚುನಾವಣೆಯಲ್ಲಿ ಮೊದಲ ಹಂತದ ಮತದಾನದಲ್ಲಿ 14 ಕ್ಷೇತ್ರದ ಮತದಾನ ನಡೆದಿದ್ದು, ಇಂದು ಮಿಕ್ಕಿದ 14 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ ಹಾಗಾಗಿ ಎಲ್ಲ ಮತದಾನ ಬಾಂಧವರು ತಮ್ಮ ಮತದಾನದ ಹಕ್ಕನ್ನು ಚಲಾಯಿಸುತ್ತಿದ್ದಾರೆ.

ದೇಶಾದ್ಯಂತ ಲೋಕಸಭೆ ಚುನಾವಣೆ 2024ರ 3 ನೇ ಹಂತದ ಚುನಾವಣೆಯಲ್ಲಿ ಕರ್ನಾಟಕದ 14 ಸಂಸದೀಯ ಕ್ಷೇತ್ರಗಳಲ್ಲಿ ಮತದಾನ ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾಯಿತು. 227 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲು ಒಟ್ಟು 2,59,52,958 ಮತದಾರರು ಹಂತ-3 ಚುನಾವಣೆಯಲ್ಲಿ ಮತ ಚಲಾಯಿಸಲು ಅರ್ಹರಾಗಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ 2ನೇ ಹಂತದ ಚುನಾವಣೆಗೆ ಮತದಾನ ನಡೆಯಲಿರುವ ಕ್ಷೇತ್ರಗಳೆಂದರೆ- ಬಿಜಾಪುರ, ಗುಲ್ಬರ್ಗ, ರಾಯಚೂರು, ಬಳ್ಳಾರಿ, ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬೀದರ್, ಕೊಪ್ಪಳ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ.

 

Related