ರಾಜಧಾನಿಯಲ್ಲಿ ಇನ್ನು 3 ದಿನ ಮಳೆ

ರಾಜಧಾನಿಯಲ್ಲಿ ಇನ್ನು 3 ದಿನ ಮಳೆ

ಬೆಂಗಳೂರು: ರಾಜ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ಮಳೆಯಾಗುತ್ತಿದ್ದು ಬೆಂಗಳೂರು ನಗರ ವಾಸಿಗಳು ಹೈರಣ್ ಆಗಿದ್ದಾರೆ. ಬೆಂಗಳೂರು ನಗರ ಸೇರಿ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಇನ್ನೂ ಮೂರು ದಿನಗಳ ಕಾಲ ಸತತವಾಗಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ.

ಇನ್ನು ಗುಡುಗು ಗಾಳಿ ಸಹಿತ ಮೂರು ದಿನಗಳ ಕಾಲ ಭಾರಿ ಮಳೆಯಾಗುತ್ತದೆ ಎಂದು ತಿಳಿದು ಬಂದಿದೆ.  ತಗ್ಗುಪ್ರದೇಶದಲ್ಲಿ ವಾಸಿಸುವವರು ಎಚ್ಚರಿಕೆಯಿಂದ ಇರಲು ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದೆ.

ನಿನ್ನೆ ಸಂಜೆ ಸುರಿದ ಮಳೆಯಿಂದ ಅವಾಂತರ ಸೃಷ್ಟಿಯಾಗಿತ್ತು. ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿತ್ತು. ಅಂಡರ್​ಪಾಸ್​ಗಳಲ್ಲಿ ನೀರು ನಿಂತು ಪ್ರಯಾಣಿಕರು ಪರದಾಡುವಂತಾಯಿತು.

 

Related