ಶೀಘ್ರದಲ್ಲೇ 36000 ಮನೆ ಹಂಚಿಕೆ: ಜಮೀರ್‌ ಅಹ್ಮದ್‌

ಶೀಘ್ರದಲ್ಲೇ 36000 ಮನೆ ಹಂಚಿಕೆ: ಜಮೀರ್‌ ಅಹ್ಮದ್‌

ಬೆಂಗಳೂರು: ರಾಜ್ಯದಲ್ಲಿರುವ ಬಡ ಜನತೆಗೆಂದು ಈ ಬಾರಿ ನಮ್ಮ ಕಾಂಗ್ರೆಸ್ ಸರ್ಕಾರವು ಸುಮಾರು 36,000 ಮನೆಗಳನ್ನು ಹಂಚಿಕೆ ಮಾಡಲಿದೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ತಿಳಿಸಿದ್ದಾರೆ. ರಾಜ್ಯದ ಜನತೆಗೆ ನಾವು ಕೊಟ್ಟ ಮಾತಿನಂತೆ ಈಗಾಗಲೇ 5 ಗ್ಯಾರಂಟಿಗಳನ್ನು ಜಾರಿ ಮಾಡಿದ್ದು, ಆರನೇ ಗ್ಯಾರಂಟಿ ಬಡ ಜನತೆಗೆ ಮನೆ ಕಲ್ಪಿಸುವುದಾಗಿ ನಮ್ಮ ಸರ್ಕಾರ ಭರವಸೆ ನೀಡಿತ್ತು. ಅದರಂತೆ ಇದೇ ಫೆಬ್ರವರಿ 24 ರಿಂದ ಸುಮಾರು 36000 ಮನೆಗಳನ್ನು ನೀಡುವುದಾಗಿ ಹೇಳಿದ್ದಾರೆ.

ಶೇಷಾದ್ರಿಪುರಂನಲ್ಲಿ ಆಯೋಜಿಸಿದ್ದ ‘ಮನೆ ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ ಅವರು, ನಾವು ಪ್ರಣಾಳಿಕೆಯಲ್ಲಿ ಹೇಳದಿದ್ದರೂ ಆರನೇ ಗ್ಯಾರಂಟಿಯಾಗಿ ವಸತಿ ಯೋಜನೆಗೆ ಫಲಾನುಭವಿಗಳು ಕೊಡಬೇಕಾದ ಹಣವನ್ನು ಸರ್ಕಾರದಿಂದಲೇ ಭರಿಸುತ್ತಿದ್ದೇವೆ.

₹7400 ಕೋಟಿ ಸ್ಲಂ ಬೋರ್ಡ್‌ಗೆ ಹಾಗೂ ₹1800 ಕೋಟಿ ರಾಜೀವ್‌ ಗಾಂಧಿ ವಸತಿ ನಿಗಮಕ್ಕೆ ನೀಡಲು ಕ್ಯಾಬಿನೆಟ್‌ನಲ್ಲಿ ಒಪ್ಪಿಗೆ ಸಿಕ್ಕಿದೆ. ಮೊದಲ ಹಂತದಲ್ಲಿ ಮುಖ್ಯಮಂತ್ರಿಗಳು ₹500 ಕೋಟಿ ಬಿಡುಗಡೆ ಮಾಡಿದ್ದಾರೆ. ಫೆ.24ರಂದು 36000 ಮನೆಗಳನ್ನು ಹಂಚಿಕೆ ಮಾಡಲಾಗುತ್ತಿದೆ. ಇನ್ನೊಂದು ವರ್ಷದಲ್ಲಿ ಎಲ್ಲ ಮನೆಗಳನ್ನು ಹಂಚಿಕೆ ಮಾಡುವ ಗುರಿ ಇಟ್ಟುಕೊಳ್ಳಲಾಗಿದೆ ಎಂದರು.

 

Related