ವಿಧಾನಪರಿಷತ್ ಚುನಾವಣೆಗೆ 40 ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ ಮಾಡಲಾಗಿದೆ: ಡಿಕೆಶಿ

ವಿಧಾನಪರಿಷತ್ ಚುನಾವಣೆಗೆ 40 ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ ಮಾಡಲಾಗಿದೆ: ಡಿಕೆಶಿ

ಬೆಂಗಳೂರು:  ವಿಧಾನಪರಿಷತ್ ಚುನಾವಣೆಯಲ್ಲಿ ಒಟ್ಟು ರಾಜ್ಯದಲ್ಲಿ 11 ಸ್ಥಾನಗಳಿದ್ದು, ಅದರಲ್ಲಿ ಕಾಂಗ್ರೆಸ್ ಪಕ್ಷಕ್ಕೆ 7 ಸ್ಥಾನ ಇದ್ದು, ಏಳು ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದಲ್ಲಿ ಸುಮಾರು 300ಕ್ಕೂ ಹೆಚ್ಚು ಆಕಾಂಕ್ಷಿಗಳು ಇರುವುದರಿಂದ ಅಭ್ಯರ್ಥಿಗಳ ಆಯ್ಕೆಯ ಪ್ರಕ್ರಿಯೆ ಬಹಳ ಕಗ್ಗಂಡಾಗಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 300 ಆಕಾಂಕ್ಷಿಗಳಲ್ಲಿ ಈಗಾಗಲೇ 40 ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ ಮಾಡಿದ್ದು, ಆ ಲಿಸ್ಟನ್ನು ಹೈಕಮಾಂಡ್ಗೆ ನೀಡಲಾಗಿದೆ. ಇನ್ನು ಈ 40 ಅಭ್ಯರ್ಥಿಗಳ ಹೆಸರಲ್ಲಿ ಏನು ಅಭ್ಯರ್ಥಿಗಳ ಹೆಸರನ್ನು ಹೈಕಮಾಂಡ್ ನಿರ್ಧಾರ ಮಾಡಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಜ್ಯದಾದ್ಯಂತ ಇಂದಿನಿಂದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಪುನರಾರಂಭ

ವಿಧಾನಸಭೆಯ ಸದಸ್ಯರಿಂದ ಆಯ್ಕೆಯಾಗುವ ಕರ್ನಾಟಕ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ಜೂನ್ 13 ರಂದು ಚುನಾವಣೆ ನಡೆಯಲಿದ್ದು, ರಾಜ್ಯ ವಿಧಾನಸಭೆಯಲ್ಲಿ 135 ಶಾಸಕರನ್ನು ಹೊಂದಿರುವ ಕಾಂಗ್ರೆಸ್ ಕನಿಷ್ಠ ಏಳು ಎಂಎಲ್‌ಸಿ ಸ್ಥಾನಗಳನ್ನು ಗೆಲ್ಲುವ ಅವಕಾಶ ಪಡೆದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಘೋಷಿಸುವ ಸಾಧ್ಯತೆ ಇದೆ. ಯತೀಂದ್ರ ಅವರು 2023ರ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರಿಗಾಗಿ ವರುಣಾ ವಿಧಾನಸಭಾ ಕ್ಷೇತ್ರವನ್ನು ತ್ಯಾಗ ಮಾಡಿದ್ದರು. ಹೀಗಾಗಿ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸುವುದು ಖಚಿತವಾಗಿದೆ.

 

Related